Ad Widget .

ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ| ಮೂರೂ ವಿಭಾಗಗಳಲ್ಲೂ ಶಾರದಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜು ಮೂರೂ ವಿಭಾಗಗಳಲ್ಲೂ ಶೇ.100 ಫಲಿತಾಂಶ ಪಡೆದುಕೊಂಡಿದೆ.

Ad Widget . Ad Widget .

ವಿಜ್ಞಾನ ವಿಭಾಗದಲ್ಲಿ 31 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು ಶೇ.100 ಫಲಿತಾಂಶ ಬಂದಿದೆ. 10 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಚೈತನ್ಯ ಯು ಶೇ.561 ಅಂಕದೊಂದಿಗೆ ಸಂಸ್ಥೆಗೆ ಅಗ್ರಸ್ಥಾನಿಯಾಗಿದ್ದಾರೆ.

Ad Widget . Ad Widget .

ವಾಣಿಜ್ಯ ವಿಭಾಗದಲ್ಲಿ 25 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. 8 ಮಂದಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು. 9 ಮಂದಿ‌ ಡಿಸ್ಟಿಂಕ್ಷನ್ ಗಳಿಸಿದ್ದಾರೆ. ಅಚಲ ಆರ್ 579 ಅಂಕ‌ಗಳಿಸಿ ಸಂಸ್ಥೆಗೆ ಅಗ್ರಸ್ಥಾನಿಯಾಗಿದ್ದಾರೆ.

Leave a Comment

Your email address will not be published. Required fields are marked *