ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಎ.24ರಿಂದ ಆರಂಭವಾಗಲಿದ್ದು, ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದೆ.
ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ.ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
10 ನೇ ತರಗತಿ ಮಕ್ಕಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಮೇ ಎರಡನೇ ವಾರದಲ್ಲಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಶೀಘ್ರ ಅಧಿಕೃತ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.ಅಧಿಕೃತ ವೆಬ್ಸೈಟ್-karresults.nic.in ಗೆ ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ಅನ್ನು ದರೆ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ.