ಎಪ್ರಿಲ್ 27 ರಂದು ರಾಹುಲ್ ಗಾಂಧಿ ಮಂಗಳೂರಿಗೆ

ಸಮಗ್ರ ನ್ಯೂಸ್: ಎಪ್ರಿಲ್ 27 ರಂದು ಮಂಗಳೂರಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ್ ಭಂಡಾರಿ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

Ad Widget ... ..

ಎಪ್ರಿಲ್ 27ರಂದು ಕಾಪುವಿಗೆ ಆಗಮಿಸುವ ರಾಹುಲ್ ಗಾಂಧಿ ಅಲ್ಲಿನ ಮೀನುಗಾರರ ಜೊತೆಗಿನ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮಂಗಳೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಜುನಾಥ್ ಭಂಡಾರಿ ತಿಳಿಸಿದ್ದಾರೆ.

Ad Widget

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎ.24ರಂದು ಮಂಗಳೂರಿಗೆ ಆಗಮಿಸಿ ಎ.25ರಂದು ಸುಳ್ಯ, ಪುತ್ತೂರು, ಬೆಳ್ತಂಗಡಿ ಕ್ಷೇತ್ರಗಳಿಗೆ ಭೇಟಿ ನೀಡಿ ಸಂಜೆ 4 ಗಂಟೆಗೆ ನಗರದ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದರು.

Leave a Comment

Your email address will not be published. Required fields are marked *