ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

Samagra news: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಿಂದ ವರದಿಯಾಗಿದೆ.

Ad Widget ... ..

ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ.

Ad Widget

ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಆತ್ಮ ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *