‘ಶೋಭಕ್ಕ, ನಿಮ್ಮ ಪಕ್ಷದವರಂತೆ ನಾವು 40% ಕಮಿಷನ್ ಪಡೆದಿಲ್ಲ’ | ಶೋಭಾ ಕರಂದ್ಲಾಜೆ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಶೋಭಕ್ಕ ನಿಮ್ಮ ಪಕ್ಷದವರಂತೆ ನಾವು 40 ಪರ್ಸೆಂಟ್‌ ಕಮಿಷನ್‌ ಪಡೆದಿಲ್ಲ. ನಿಮ್ಮ ಕಮಿಷನ್‌ ಸರ್ಕಾರದ ಬಗ್ಗೆ ಬಸನಗೌಡ ಪಾಟೀಲ್‌ ಯತ್ನಾಳ್‌, ನೆಹರೂ ಓಲೇಕಾರ್‌, ಮಾಡಾಳ್‌ ವಿರೂಪಾಕ್ಷಪ್ಪ, ಎಚ್‌. ವಿಶ್ವನಾಥ್‌, ಗೂಳಿಹಟ್ಟಿ ಶೇಖರ್‌ ಅವರೇ ಸಾಕ್ಷಿ ನೀಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

Ad Widget ... ..

ಟಿಕೆಟ್‌ ಅರ್ಜಿ ಜತೆಗೆ ಕಾಂಗ್ರೆಸ್‌ ಪಕ್ಷ 2 ಲಕ್ಷ ರೂ ಸ್ವೀಕರಿಸಿದೆ. ಹೀಗಾಗಿ ಚುನಾವಣಾ ಆಯೋಗವು 223 ಕಾಂಗ್ರೆಸ್‌ ಅಭ್ಯರ್ಥಿಗಳ ನಾಮಪತ್ರಗಳನ್ನು ತಿರಸ್ಕಾರ ಮಾಡಬೇಕು ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ನಾವು ಅರ್ಜಿ ಶುಲ್ಕ 5 ಸಾವಿರ ರು. ಹಾಗೂ ಪಕ್ಷದ ಕಟ್ಟಡಕ್ಕೆ ದೇಣಿಗೆಯಾಗಿ ಅಧಿಕೃತವಾಗಿ 2 ಲಕ್ಷ ರು. ಸಂಗ್ರಹಿಸಿದ್ದೇವೆ. ಮೊದಲು ನಿಮ್ಮ ಸರ್ಕಾರದಲ್ಲಿನ 40 ಪರ್ಸೆಂಟ್‌ ಕಮಿಷನ್‌ ಬಗ್ಗೆ ಮಾತನಾಡಿ ಎಂದು ತಿರುಗೇಟು ನೀಡಿದರು.

Ad Widget

ಯಡಿಯೂರಪ್ಪ ಅವರನ್ನು ಮುಗಿಸಲು ಬಿಜೆಪಿಯಲ್ಲಿನ ಕೆಲವರು ಪಿತೂರಿ ನಡೆಸಿದರು. ಅವರ ಜತೆ ಸೇರಿ ಶೋಭಾ ಕರಂದ್ಲಾಜೆಯೂ ಸಂಚು ರೂಪಿಸಿದ್ದಾರೆ. ಯಾರು ಯಾರನ್ನು ಮುಗಿಸಲು ಯತ್ನಿಸಿದ್ದಾರೆ ಎಂದು ಜಗದೀಶ್‌ಶೆಟ್ಟರ್‌, ಲಕ್ಷ್ಮಣ ಸವದಿ ಹೇಳಿದ್ದಾರೆ ಎಂದರು.

Leave a Comment

Your email address will not be published. Required fields are marked *