ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

Ad Widget ... ..

ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು.

Ad Widget

ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.

Leave a Comment

Your email address will not be published. Required fields are marked *