ಪುತ್ತೂರು: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯ ಪರಿಚಯ| ಜಾತ್ರೆಯಂದು ಅತ್ಯಾಚಾರ

ಸಮಗ್ರ ನ್ಯೂಸ್: ಫೇಸ್‌ಬುಕ್‌ನಲ್ಲಿ ಅಪ್ರಾಪ್ತೆಯನ್ನು ಪರಿಚಯವಾಗಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿ ಅತ್ಯಾಚಾರ ನಡೆಸಿದ ಬಗ್ಗೆ ಅಪ್ರಾಪ್ತೆಯೋರ್ವಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

Ad Widget ... ..

ಕೆಯ್ಯೂರು ಗ್ರಾಮದ ಮಾಡವು ನಿವಾಸಿ ನವೀನ್ ಪ್ರಕರಣದ ಆರೋಪಿ. ನವೀನ್ ಫೇಸ್‌ಬುಕ್‌ನಲ್ಲಿ ಪರಿಚಯವಾದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಎ.೧೬ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಭೇಟಿಯಾಗಿದ್ದ. ಬಳಿಕ ಆಕೆಯನ್ನು ಪುಸಲಾಯಿಸಿ ರಾತ್ರಿ ಸ್ಕೂಟರ್‌ನಲ್ಲಿ ಕೆಯ್ಯೂರಿನ ಮಾಡಾವು ಅಂಗನವಾಡಿ ಬಳಿ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *