ಸಮಗ್ರ ನ್ಯೂಸ್: “ರಾಜ್ಯದಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬಲವಾಗಿ ಬೀಸುತ್ತಿದ್ದು ಜನತೆ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ನಾನು ಶಾಸಕನಾಗಿದ್ದಾಗ ಮಾಡಿದ್ದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿಯನ್ನು ನೋಡಿ ಜನರು ಮತ ಕೊಟ್ಟು ಗೆಲ್ಲಿಸಲಿದ್ದಾರೆ. ಪ್ರಚಾರ ಸಂದರ್ಭದಲ್ಲಿ ನನ್ನ ಪರ ಇರುವ ಜನರ ಬೆಂಬಲ ನೋಡಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನಡುಕ ಶುರುವಾಗಿದೆ” ಎಂದು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯಿದೀನ್ ಬಾವಾ ಹೇಳಿದ್ದಾರೆ.

ಅವರು ಸೋಮವಾರ ಪಂಜಿಮೊಗರು, ಕಾಟಿಪಳ್ಳ, ಗಣೇಶಪುರ ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣೆ ಪ್ರಚಾರದಲ್ಲಿ ತೊಡಗಿಕೊಂಡರು. ಮನೆ ಮನೆಗೆ ಭೇಟಿ ನೀಡಿದ್ದಲ್ಲದೆ ಬಸ್ ಹತ್ತಿ ಪ್ರಯಾಣಿಕರ ಬಳಿ ಮತ ನೀಡುವಂತೆ ಮನವಿ ಮಾಡಿದರು. ರಿಕ್ಷಾ ಚಾಲಕರನ್ನು ಭೇಟಿಯಾಗಿ ಸಮಸ್ಯೆಯನ್ನು ಆಲಿಸಿ ಮತ ಕೊಟ್ಟು ಗೆಲ್ಲಿಸುವಂತೆ ಕೇಳಿಕೊಂಡರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.