ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಸುಳ್ಯಕ್ಕೆ ಆಗಮಿಸಿದ್ದಾರೆ. ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದಾರೆ.
ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಸುಳ್ಯದ ಹೆಲಿಪ್ಯಾಡ್ ಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಸಮಾವೇಶ ನಡೆಯಲಿರುವ ಸುಳ್ಯದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದ ಬಳಿ ಆಗಮಿಸಿ ಸಭೆಯಲ್ಲಿ ಭಾಗವಹಿಸಿ, ಪಾಲ್ಗೊಂಡಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಸುಳ್ಯದ ಇತಿಹಾಸದಲ್ಲಿ ಎಐಸಿಸಿ ಅಧ್ಯಕ್ಷರೋರ್ವರು ಪ್ರಥಮ ಬಾರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ. ರಾಜ್ಯ, ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕರು, ಮುಖಂಡರು ಸೇರಿದಂತೆ ಪ್ರಮುಖರು ಭಾಗವಹಿಸಿದ್ದಾರೆ. ಪೊಲೀಸ್ ಹಾಗೂ ಅರೆ ಸೇನಾ ಪಡೆ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ, ಸುಳ್ಯ ವಿಧಾನ ಸಭಾ ಕ್ಷೇತ್ರ, ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮದ ಸಿದ್ಧತೆಗಳನ್ನು ನಡೆಸಲಾಗಿದೆ.