Ad Widget .

ಬೆಳ್ತಂಗಡಿ: ಹದಿನೈದು ವರ್ಷದ ಪ್ರೀತಿ ಹನಿಮೂನ್ ದಿನ ಬಂದ ಮೆಸೇಜ್‌ನಿಂದ ಕಳಚಿ ಬಿತ್ತು!! ಗಂಡನ ವಾಟ್ಸಪ್ ಚೆಕ್ ಮಾಡಿದಾಕೆ ಪ್ರಾಣವನ್ನೇ ಕಳೆದುಕೊಂಡ್ಳು! ನಿಷ್ಕಲ್ಮಶ ಪ್ರೀತಿ ಸಾವಲ್ಲಿ ಅಂತ್ಯ| ಪ್ರೀತಿ ಕೊಂದ ಕೊಲೆಗಾರ

ಸಮಗ್ರ ನ್ಯೂಸ್: ಈ ಮುದ್ದಾದ ಜೋಡಿಯನ್ನು ಒಮ್ಮೆ ನೋಡಿ. 22 ವರ್ಷದ ಸ್ನೇಹ, ಬರೋಬ್ಬರಿ 15 ವರ್ಷದ ಪ್ರೀತಿ ಇವರದ್ದು. ಈಕೆಯ ಹೆಸರು ಕೌಶಲ್ಯ. ಈತನ ಹೆಸರು ಸುಖೇಶ್. ಪ್ರೀತಿಸಿ ಖುಷಿಯಿಂದ ಮದುವೆಯೂ ಆಗಿದ್ದರು. ಆದರೆ ಬೆನ್ನ ಹಿಂದೆ ಸುರ ಸುಂದರಾಂಗ ಪತಿ ಮಾಡಿದ ಕೆಲಸ ಮಾತ್ರ ಊಹೆಗೂ ನಿಲುಕದ್ದು. 15 ವರ್ಷದಿಂದ ಪ್ರೀತಿಸಿ ಮದುವೆಯಾಗಿದ್ದವಳು ಜೊತೆಗಿರುವಾಗಲೇ ತನ್ನ ಅತ್ತಿಗೆಯ ಜೊತೆ ಸಂಬಂಧವಿಟ್ಟುಕೊಂಡಿದ್ದ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಬಡ ಕುಟುಂಬದ ಕೌಶಲ್ಯ ಶ್ರೀಮಂತನಾಗಿದ್ದ ಸುಕೇಶ್‌ನ್ನು ಮದ್ವೆಯಾಗಿದ್ದಳು. ಮದುವೆಯಾದ ಬಳಿಕ ಗಂಡನ ಜೊತೆ ಜೊತೆಯಲ್ಲೇ ಇರಬೇಕು ಅಂತಾ ಇತ್ತೀಚೆಗೆ ಮೂಡಬಿದ್ರೆಯಿಂದ ಉಜಿರೆಗೆ ವರ್ಗಾವಣೆ ಪಡೆದುಕೊಂಡಿದ್ದಳು. ಮದುವೆಯಾಗಿ ಸ್ವಲ್ಪ ದಿನ ಮನೆಯಲ್ಲಿದ್ರು. ಬಳಿಕ ಹನಿಮೂನ್ ಗಾಗಿ ದೂರದೂರಿಗೆ ಪ್ರಯಾಣ ಬೆಳೆಸಿದ್ರು. ಹನಿಮೂನ್ ನಲ್ಲಿ ತಮ್ಮ 22 ವರ್ಷದ ಸ್ನೇಹ ಮತ್ತು 15 ವರ್ಷದ ಪ್ರೀತಿಯನ್ನು ಯಶಸ್ವಿಯಾಗಿ ಗೆದ್ದ ಖುಷಿಯಲ್ಲಿದ್ರು.

Ad Widget . Ad Widget .

ಹನಿಮೂನ್ ನ ಸುಖದ ಸುಪ್ಪತ್ತಿಗೆಯಲ್ಲಿ ತೇಲಾಡುತ್ತಿದ್ದಾಗ ಬಂದ ಅದೊಂದು ಮೆಸೇಜ್ ಗೆ ಇಡೀ ಪ್ರೀತಿಯನ್ನೇ ಬುಡಮೇಲು ಮಾಡುವ ಶಕ್ತಿ ಇತ್ತು. ಆ ಮೆಸೇಜ್ ಬಂದಿದ್ದು ಸುಕೇಶ್ ನ ಮೊಬೈಲ್ ಗೆ. ಹೌದು, ಆಸ್ತಿ ಅತ್ತಿಗೆ ಅನ್ನೊ ನಂಬರ್ ನಿಂದ ಬಂದ ಮೆಸೇಜ್ ಅದಾಗಿತ್ತು. ‘ಈಗ ನಿಂಗೆ ನನ್ನ ಅವಶ್ಯಕತೆ ಇಲ್ಲ ಅಲ್ವಾ. ನಂಗೆ ಪ್ರೀತಿ ಕೊಡಲು ಆಗಲ್ಲ ಅಲ್ವಾ. ಬಿಟ್ಟು ಬಿಡು ನನ್ನ ಅಂತಾ ಮೆಸೇಜ್’!. ಇದನ್ನ ನೋಡಿ ಕೌಶಲ್ಯಳಿಗೆ ಆಕಾಶ ಕಳಚಿ ಬಿದ್ದಂತಾಗಿತ್ತು.

ಅಲ್ಲಿಂದ ಊರಿಗೆ ಬಂದ್ರು. ಅಲ್ಲಿಂದ ಕೌಶಲ್ಯಳು ತನ್ನ ಪತ್ತೇದಾರಿ ಕೆಲಸ ಆರಂಭಿಸಿದ್ಲು. ಒಂದು ಕಡೆ 15 ವರ್ಷದಿಂದ ಕೌಶಲ್ಯಳ ಜೊತೆ ಪ್ರೀತಿ. ಇನ್ನೊಂದು ಕಡೆ ತಾಯಿ ಸಮಾನಳಾದ ಅತ್ತಿಗೆ ಜೊತೆ ಪ್ರಣಯ. ಸುಖಪುರುಷನಾಗಿದ್ದ ಸುಕೇಶ ಕುಟುಂಬಕ್ಕೆ ಕಳ್ಳಬೆಕ್ಕಾಗಿದ್ದ.

ಸುಕೇಶಾ ಹುಟ್ಟು ಶ್ರೀಮಂತ. ಕೋಟಿಗೆ ಬಾಳುವ ಕುಟುಂಬ. ಆತನ ಮೈಯೆಲ್ಲಾ ಸುಖವನ್ನು ಬಯಸುತ್ತಿತ್ತು. ಆತ ಶ್ರೀಮಂತನಾಗಿದ್ರು ಆತನ ಪ್ರೀತಿ ಕಿತ್ತು ಕೆರಹಿಡಿಯೋವಷ್ಟು ಬಡವಾಗಿತ್ತು. ತಾಯಿ ಸಮಾನಳಾದ ಅತ್ತಿಗೆಯೊಂದಿಗೆ ಆತ ಅಕ್ರಮ ಸಂಬಂಧವನ್ನು ಹೊಂದಿದ್ದು. ಬಹಳ ವರ್ಷಗಳಿಂದ ಅತ್ತಿಗೆ ಆಸ್ತಿಕಾಳ ಜೊತೆ ಕುಚು ಕುಚು ನಡೆಸಿದ್ದ. ಈ ಕುಚು ಕುಚುಗೆ ಕೌಶಲ್ಯಳ ಜೊತೆ ನಡೆದ ಮದುವೆ ಅಡ್ಡವಾಗಿತ್ತು. ಹನಿಮೂನ್ ನಲ್ಲಿ ಬಂದ ಮೆಸೇಜ್ ಕೂಡ ಅದೇ ಆಗಿತ್ತು.

ಗಂಡನ ಮೇಲೆ ಅನುಮಾನ ಬಂದು ಅವನ ಮೊಬೈಲ್ ವಾಟ್ಸಾಪ್ ಬ್ಯಾಕ್ ಅಪ್ ನ್ನು ಕೌಶಲ್ಯ ತನ್ನ ಮೊಬೈಲ್ ಗೆ ಬರುವಂತೆ ಮಾಡಿಕೊಂಡಿದ್ದಳು. ಹೀಗೆ ಮಾಡಿ ಗಂಡನನ್ನು ಫ್ರೀಯಾಗಿ ಬಿಟ್ಟಿದ್ದಳು. ಆಗ ಆತನ ಮೋಸದಾಟ ಬಯಲಾಗಿ ಬ್ಯಾಕಪ್ ನಲ್ಲಿ ಬಿದ್ದಿತ್ತು.ಅಕ್ರಮ ಸಂಬಂಧವನ್ನು ಸರಿ ಮಾಡಿದ್ರು ಅದನ್ನು ಸರಿ ಮಾಡಲು ಸಾದ್ಯವಿಲ್ಲ ಅನ್ನೊದು ಕೌಶಲ್ಯಳಿಗೆ ಗೊತ್ತಾಗಿಹೋಗಿತ್ತು. ಇದೇ ವಿಚಾರವನ್ನು ತನ್ನ ಮಾವನ ಮನೆಯಲ್ಲಿ ಹೇಳಿದ್ದಾಳೆ. ಮಾವ ತನ್ನ ಮಗನದ್ದೇನು ತಪ್ಪಿಲ್ಲ. ನೀನು ಬಂದಾಗಿನಿಂದ ಈ ಸಮಸ್ಯೆ ಅಂತಾ ಕೌಶಲ್ಯಳ ಮೇಲೆ ಗೂಬೆ ಕೂರಿಸಿದ್ದಾರೆ.

ಇನ್ನು ತವರು ಮನೆಯಲ್ಲಿ ಹೇಳಿದ್ರು, ಅವರು ಹೇಗೊ ಸಂಸಾರ ಸಾಗಿಸು. ಎಲ್ಲವನ್ನು ಸರಿ ಮಾಡೊಣ ಅಂತಾ ಹೇಳಿದ್ದಾರೆ. ಆದ್ರೆ ಕೌಶಲ್ಯ ಸಾಯೊ ನಿರ್ಧಾರ ಮಾಡಿದ್ದಾಳೆ. ಕಚೇರಿಯಿಂದ ಮರಳಿ ಬರುವಾಗ ಕೀಟನಾಶಕವನ್ನು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನದಲ್ಲದ ತಪ್ಪಿಗೆ ತನಗೆ ತಾನೆ ಶಿಕ್ಷೆ ಕೊಟ್ಟಿಕೊಂಡಿದ್ದಾಳೆ. ಕೀಟನಾಶಕವನ್ನು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಿನ್ನೆ ಮನೆ ಮಗಳು ಕೌಶಲ್ಯ ಸಾವನ್ನಪ್ಪಿದ ತಕ್ಷಣ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋದ ಆಕೆಯ ಸಂಬಂಧಿಕರು ಕೌಶಲ್ಯ ಪತಿ ಸುಕೇಶ್, ಸುಕೇಶ್ ನ ತಂದೆ ಹಾಗೂ ಸುಕೇಶ್ ನ ದೊಡ್ಡಪ್ಪನ ಮಗನ ಹೆಂಡತಿ ಅಂದ್ರೆ ಸುಕೇಶ್ ನ ಅತ್ತಿಗೆ ಆಸ್ತಿಕಾ ಮೇಲೆ ದೂರನ್ನು ನೀಡಿದ್ರು. ಸುಕೇಶ್ ಗೂ, ಆತನ ದೊಡ್ಡಪ್ಪನ ಮಗನ ಹೆಂಡತಿ ಆಸ್ತಿಕಾ ಗೂ ಅಕ್ರಮ ಸಂಬಂಧ ಇದೆ ಅಂತಾ ದೂರು ನೀಡಿದ್ದಾರೆ.

Leave a Comment

Your email address will not be published. Required fields are marked *