Ad Widget .

ಪ್ರ.ದ ಕಾಲೇಜು ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್| ಎರಡು ತಿಂಗಳ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ ಮತ್ತು ಏಪ್ರಿಲ್-2023ರ ತಿಂಗಳ ಗೌರವಧನವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ.

Ad Widget . Ad Widget .

ಈ ಸಂಬಂಧ ಇಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ನಡವಳಿಯನ್ನು ಹೊರಡಿಸಿದ್ದಾರೆ. 2023-24ನೇ ಸಾಲಿನ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಸಯದಡಿ ಬರುವ ಕಾಲೇಜು ಶಿಕ್ಷಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 2023 ರಿಂದ ಜುಲೈ-2023ರ ಅವಧಿಯ ವೆಚ್ಚಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ.

Ad Widget . Ad Widget .

2023-24ನೇ ಸಾಲಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಮಾರ್ಚ್ 2023 ಮತ್ತು ಏಪ್ರಿಲ್ 2023ರ ಮಾಹೆಗಳ ಗೌರವಧನವನ್ನು ಪಾವತಿಸಲು ರೂ.51,71,48,684 ಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರುಗಳಿಗೆ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *