Ad Widget .

ಕೊಟ್ಟಿಗೆಹಾರ: ಹೆಂಡತಿಯನ್ನು ಬಸ್ಸು ಹತ್ತಿಸಿ ಬರುತ್ತೇನೆಂದ ಪತಿ ಶವವಾಗಿ ಪತ್ತೆ|ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:

ಸಮಗ್ರ ನ್ಯೂಸ್:ಹೆಂಡತಿಯನ್ನು ಬಸ್ಸು ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ.

Ad Widget . Ad Widget .

ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (೪೦) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ಮಾಡುತ್ತಿದ್ದ ದಿಲೀಪ್ ಉಜಿರೆಯಲ್ಲಿ ವಾಸವಿದ್ದರು. ಪತ್ನಿಯೊಂದಿಗೆ ತೇಗೂರಿಗೆ ಬಂದಿದ್ದ ದಿಲೀಪ್ ಬುಧವಾರ ಬೈಕ್‌ನಲ್ಲಿ ಉಜಿರೆಗೆ ಹೊರಟ್ಟಿದ್ದು ಕೊಟ್ಟಿಗೆಹಾರ ಸಮೀಪ ಬರುತ್ತಿದ್ದಂತೆ ಮಳೆ ಪ್ರಾರಂಭವಾಗಿದ್ದರಿಂದ ಪತ್ನಿಯನ್ನು ಬಸ್ಸಿಗೆ ಹತ್ತಿಸಿ ಉಜಿರೆಗೆ ಹೋಗಿರಲು ಹೇಳಿ ತಾನು ಮಳೆ ನಿಂತ ಮೇಲೆ ಬೈಕ್‌ನಲ್ಲಿ ಬರುವುದಾಗಿ ತಿಳಿಸಿದ್ದಾರೆ.
ಬುಧವಾರ ಸಂಜೆ ಹೆಬ್ಬರಿಗೆ ಸಮೀಪ ರಸ್ತೆ ಬದಿಯಲ್ಲಿ ದಿಲೀಪ್ ಅವರ ಮೃತದೇಹ ಪತ್ತೆಯಾಗಿದೆ. ಮೃತದೇಹದ ಜೊತೆಗಿದ್ದ ಮೊಬೈಲ್‌ನಿಂದಾಗಿ ಮೃತದೇಹದ ಗುರುತು ಪತ್ತೆಯಾಗಿದೆ.

Ad Widget . Ad Widget .

ಈ ಬಗ್ಗೆ ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್, ಎಎಸ್‌ಐ ಶಶಿ, ಸಿಬ್ಬಂದಿಗಳಾದ ಜಗದೀಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಸ್ಕೂಟಿ ಪತ್ತೆ:
ದಿಲೀಪ್ ಅವರ ಸ್ಕೂಟಿ ಚಾರ್ಮಾಡಿ ಘಾಟ್ ನ ಅಣ್ಣಪ್ಪಸ್ವಾಮಿ ದೇವಸ್ಥಾನದ ಸಮೀಪ ಅಪಘಾತವಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿದ್ದ ಮನೆಯ ಗೃಹಪ್ರವೇಶ ಮೇ 5 ರಂದು ಹಮ್ಮಿಕೊಂಡಿದ್ದು ಗೃಹಪ್ರವೇಶಕ್ಕೆ ಆಹ್ವಾನಿಸಲೆಂದು ಚಿಕ್ಕಮಗಳೂರಿಗೆ ಬಂದಿದ್ದವರು ಹಿಂದಿರುಗುವ ವೇಳೆ ಈ ಘಟನೆ ನಡೆದಿದ್ದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

Leave a Comment

Your email address will not be published. Required fields are marked *