Ad Widget .

ಕಾಂಗ್ರೆಸ್ ಕೈ ಹಿಡಿಯಲಿರುವ ಗೀತಾ ಶಿವರಾಜ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹತ್ವದ ರಾಜಕೀಯ ವಿದ್ಯಮಾನ ಎನ್ನುವಂತೆ ನಾಳೆ (ಎ.28) ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.

Ad Widget . Ad Widget .

ಈ ಕುರಿತಂತೆ ಕೆಪಿಸಿಸಿ ಕಚೇರಿಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ನಾಳೆ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದೆ.

Ad Widget . Ad Widget .

ಅಂದ ಹಾಗೇ ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ನಾಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ.

Leave a Comment

Your email address will not be published. Required fields are marked *