Ad Widget .

Weather Report| ಹವಾಮಾನ ವರದಿ| ಚಂಡಮಾರುತ ಪರಿಣಾಮ; ಮುಂದಿನ 24ಗಂಟೆಗಳಲ್ಲಿ ರಾಜ್ಯಾದ್ಯಂತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಇದರ ಪರಿಣಾಮ ಕರ್ನಾಟಕದ ಮೇಲೂ ಆಗುತ್ತಿದೆ. ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬಹಳಷ್ಟು ಕಡೆ ಮಳೆಯಾಗಿದೆ.

Ad Widget . Ad Widget . Ad Widget .

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಧೋಳ, ಔರಾದ್, ಅಡಕಿ, ಸುಂಟಿಕೊಪ್ಪ, ಶನಿವಾರಸಂತೆ, ಚನ್ನಪಟ್ಟಣ, ಬಾಳೆಹೊನ್ನೂರು, ಹೊಸದುರ್ಗ, ಕುರ್ಡಿ, ಕವಡಿಮಟ್ಟಿ, ಶೋರಾಪುರ, ಮೂರ್ನಾಡು, ನಾಪೋಕ್ಲು, ಚಿಕ್ಕಮಗಳೂರು, ಯುಗಟಿ, ಕಳಸ, ಹೊನ್ನಾಳಿ, ಚಿಂಚೋಳಿ, ಸೇಡಂ, ತಾಳಿಕೋಟೆ, ಸೋಮವಾರಪೇಟೆ, ಹಾರಂಗಿ, ಶ್ರೀಮಂಗಲ, ಶ್ರವಣಬೆಳಗೊಳ, ಕುಕ್ಕೆ ಸುಬ್ರಹ್ಮಣ್ಯ, ಮಡಿಕೇರಿ, ಸುಳ್ಯ, ಪುತ್ತೂರು ಹಾಗೂ ಕರಾವಳಿಯ ಬಹುತೇಕ‌ ಕಡೆಗಳಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ಎಚ್​ಎಎಲ್​ನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *