ಉಪ್ಪಿನಂಗಡಿ: ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಕೇರಳದ ತಂಡ

ಸಮಗ್ರ ನ್ಯೂಸ್: ರಿಕ್ಷಾ ಚಾಲಕ ಮೇಲೆ ಕೇರಳ ನೋಂದವಣೆಯ ಕಾರೊಂದರಲ್ಲಿ ಬಂದ ತಂಡ ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

Ad Widget ... ..

ಪೇರಮಜಲು ವಿಶ್ವನಾಥ್ ಹಲ್ಲೆಗೊಳಗಾದ ಆಟೋ ಚಾಲಕ ಎನ್ನಲಾಗಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕ ಹಾಗೂ ಕೇರಳ ನೋಂದಣಿಯ ಕಾರಿನಲ್ಲಿ ಬಂದ ವ್ಯಕ್ತಿಗಳ ನಡುವೆ ವಾಹನ ಓವರ್ ಟೇಕ್ ಮಾಡುವ ವಿಚಾರಕ್ಕೆ ಜಗಳ ನಡೆದಿದ. ಬಳಿಕ ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು ಆಟೋ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಆಟೋ ಚಾಲಕ ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget

ಹಲ್ಲೆ ವಿಚಾರ ತಿಳಿದು ಆಸ್ಪತ್ರೆಗೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಡಿವೈಎಸ್ಪಿ ಡಾ ವೀರಯ್ಯ ಹಿರೇಮಠ್, ಎಸ್.ಐ ಸುಚೇತ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿ ಪಡೆದು ಕೊಂಡಿದ್ದಾರೆ.

Leave a Comment

Your email address will not be published. Required fields are marked *