ಸಮಗ್ರ ನ್ಯೂಸ್: ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಎ.28 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಸಂಭವಿಸಿದೆ.
ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀವೇಗದ ಬಂದ ಕಾರು ಢಿಕ್ಕಿ ಹೊಡೆದಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದು,ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಂಜಾಲಕಟ್ಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.