ಸಮಗ್ರ ನ್ಯೂಸ್: ಕುಕ್ಕೆಸುಬ್ರಹ್ಮಣ್ಯದಲ್ಲಿ ಶನಿವಾರ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಯಿತು. ಒಂದು ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಕುಮಾರಧಾರದ ಬಳಿ ಮುಖ್ಯರಸ್ತೆಗೆ ಅಡ್ಡಲಾಗಿ ಮರವೊಂದು ಬಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಬಳಿಕ ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಲಾಯಿತು.
ಗಾಳಿಯಿಂದಾಗಿ ಕೆಲ ಮನೆಗಳ ಚಾವಣಿಗೆ ಹಾಕಿದ ಶೀಟುಗಳು ನೆಲಕ್ಕುರುಳಿವೆ. ಕೆಲವೆಡೆ ವಿದ್ಯುತ್ ತಂತಿ ಮೇಲೆ ಮರದ ಕೊಂಬೆ ಬಿದ್ದು ಹಾನಿಯಾಗಿವೆ. ಹೀಗಾಗಿ, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕುಮಾರಪರ್ವತ ಭಾಗದಲ್ಲಿ ಹಾಗೂ ಸುತಮುತ್ತಲ ಪ್ರದೇಶಗಳಲ್ಲಿಯೂ ಗಾಳಿಯೊಂದಿಗೆ ಮಳೆ ಸುರಿಯಿತು.