Ad Widget .

ಮೇ.೧ ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮಂಗಳೂರಿಗೆ

ಸಮಗ್ರ ನ್ಯೂಸ್; ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮೇ ೧ರಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Ad Widget . Ad Widget .

ಈ ಕುರಿತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರುಕ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಧ್ಯಾಹ್ನ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಅಗಮಿಸಲಿದ್ದು, ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬಳಿಕ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬಲವಂಡಿ ದೈವಸ್ಥಾನ, ಗುರುಪುರ ಕಂಬಳ ದರ್ಗಾ ಭೇಟಿ ನೀಡಲಿದ್ದಾರೆ. ಸಂಜೆ ೫ ಗಂಟೆಗೆ ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮೇ ೧ ಕಾರ್ಮಿಕ ದಿನದ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಮ್ಮಾನ ನಡೆಯಲಿದೆ ಎಂದರು.

Ad Widget . Ad Widget .

ಇನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮೇ ೫ರಂದು ಕೃಷ್ಣಾಪುರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಫಾರೂಕ್ ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *