Ad Widget .

ಮುಂಬೈ: 3 ಅಂತಸ್ತಿನ ಕಟ್ಟಡ ಕುಸಿದು ನಾಲ್ವರ ದುರ್ಮರಣ; 12 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಥಾಣೆಯಲ್ಲಿ ಶನಿವಾರ(ಎ. 29) ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಅವಶೇಷಗಳಡಿ ಸಿಲುಕಿ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಸುಮಾರು 20 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ 12 ಜನರನ್ನು ರಕ್ಷಿಸಲಾಗಿದೆ.

Ad Widget . Ad Widget .

ಮಹಾರಾಷ್ಟ್ರದ ಥಾಣೆಯಲ್ಲಿರುವ ಭಿವಂಡಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿದಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಎನ್ಡಿಆರ್ ಎಫ್ ಹಾಗೂ ಟಿಡಿಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Ad Widget . Ad Widget .

ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 12 ಜನರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಗಾಯಾಳುಗಳನ್ನು ಇಂದಿರಾಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆಸ್ಪತ್ರೆಗೆ ಆಗಮಿಸಿ ಘಟನೆಯ ಕುರಿತು ಮತ್ತು ಗಾಯಾಳುಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ ಸರ್ಕಾರಿ ವೆಚ್ಚದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *