April 2023

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು ಏಪ್ರಿಲ್‌ 24 ಅಥವಾ 25ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿಪೂರ್ಣಗೊಳಿಸಿದೆ. ಪ್ರತಿ ವಿಷಯದಲ್ಲಿ ಬಹು ಆಯ್ಕೆ ಸೇರಿದಂತೆ ಒಂದು ಅಂಕದ […]

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ Read More »

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮತ್ತು ಶುಕ್ರವಾರ (ಎ.19, 20) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ

Weather report|ಹವಾಮಾನ ವರದಿ| ರಾಜ್ಯದ ಕೆಲವೆಡೆ ಎರಡು ದಿನ ಮಳೆ ಸಂಭವ Read More »

ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ.‌ ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಉಳಿದಂತೆ ರಾಯಚೂರು –

ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ Read More »

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಿಜೆಪಿಯಿಂದ ಬಾಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ. ಇನ್ನೂ ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ Read More »

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಡದ ಕಾರಣ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಲ್ಲಿ ನಡೆದಿದೆ. ಗ್ರಾಮದ ಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ ಪ.ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವ 20 ಕುಟುಂಬದವರ ಮನೆಯ ಅಡಿಸ್ಥಳ ಇದುವರೆಗೂ ಪಹಣಿ‌ಯಾಗಿರುವುದಿಲ್ಲ. ಅರ್ಜಿ ಸಲ್ಲಿಸಿದರೂ ವಿಳಂಬ ನೀತಿ ಅನುಸರಿಸುತ್ತಿರುವ ಆಡಳಿತ ಮತ್ತು ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತದಾನ ಬಹಿಷ್ಕರಿಸಿ ಹೋರಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ Read More »

ಕಾಗವಾಡ:ನಾಮಪತ್ರ ಸಲ್ಲಿಕೆ ಮಾಡಿದ ಶ್ರೀಮಂತ ಪಾಟೀಲ

ಸಮಗ್ರ ನ್ಯೂಸ್: ಕಾಗವಾಡ ತಾಲೂಕಾ ಪಟ್ಟಣದಲ್ಲಿರುವ ಚುಣಾವಣಾ ಅಧಿಕಾರಿಯ ಕಚೇರಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀಮಂತ ಪಾಟೀಲ ಅವರು ಬೃಹತ್ ಬೈಕ್ ರ‍್ಯಾಲಿ ಮಾಡುವ ಮೂಲಕ ಎ.19ರಂದು ನಾಮಪತ್ರವನ್ನು ಸಲ್ಲಿಕೆ ಮಾಡಿದರು ನಂತರ ಶಾಂತಿಸಾಗರ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಇವತ್ತಿನ ನನಗೆ ತುಂಬಾ ಖುಷಿ ತಂದ ದಿನವಾಗಿದ್ದು ನನ್ನ ಮತಕ್ಷೇತ್ರದಲ್ಲಿ ಈಗಾಗಲೇ 70 ರಷ್ಟು ಕೆಲಸ ಮಾಡಿದ್ದೇನೆ ಮುಂದಿನ ಸಲ ನಿವು ನನಗೆ ಮತ್ತೋಮ್ಮೆ ಆಶಿರ್ವಾದ ಮಾಡಿ ಎಂದು ಮತದಾರರಲ್ಲಿ

ಕಾಗವಾಡ:ನಾಮಪತ್ರ ಸಲ್ಲಿಕೆ ಮಾಡಿದ ಶ್ರೀಮಂತ ಪಾಟೀಲ Read More »

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಮೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್ 5ನೇ ಪಟ್ಟಿಯಲ್ಲೂ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. 5ನೇ ಪಟ್ಟಿಯಲ್ಲಿ ಬೆಂಗಳೂರು ನಗರದ ಕೆ.ಆರ್ ಪುರಂ, ಪುಲಕೇಶಿ ನಗರ, ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಪಕ್ಷ, ಮಂಗಳೂರು ಉತ್ತರ ಕ್ಷೇತ್ರ ಸೇರಿದಂತೆ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸದೇ ಬಾಕಿಯುಳಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಿಎಂ ಬಸವರಾಜು

ಕಾಂಗ್ರೆಸ್ ಅಭ್ಯರ್ಥಿಗಳ 5ನೇ ಪಟ್ಟಿ ಪ್ರಕಟ| ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ; ಉತ್ತರ‌ ಸಿಗದ ಮಂಗಳೂರು ಉತ್ತರ ಕ್ಷೇತ್ರ Read More »

Sullia: ತ್ಯಾಜ್ಯ ಎಸೆದವರಿಗೆ ಐವರ್ನಾಡು ಪಂಚಾಯತ್ ನಿಂದ ದಂಡ

ಸಮಗ್ರ ನ್ಯೂಸ್: ಪಂಚಾಯತ್ ಅಧಿಕಾರಿಗಳು ತ್ಯಾಜ್ಯ ಎಸೆದವರಿಂದಲೆ ವಿಲೇವಾರಿ ಮಾಡಿಸಿ ದಂಡ ವಿಧಿಸಿದ ಘಟನೆ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಟಿಕೇರಿ ಎಂಬಲ್ಲಿ ಎ.17 ರಂದು ನಡೆದಿದೆ. ಎ.17 ರಂದು ನಾಟಿಕೇರಿ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಏ.18ರಂದು ನಾಟಿಕೇರಿ ಪರಿಸರಕ್ಕೆ ಭೇಟಿ ನೀಡಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿದ್ದಾರೆ. ಬಳಿಕೆ ತ್ಯಾಜ್ಯ ಬಿಸಾಡಿದ ಮೂಡಬಿದ್ರೆಯ

Sullia: ತ್ಯಾಜ್ಯ ಎಸೆದವರಿಗೆ ಐವರ್ನಾಡು ಪಂಚಾಯತ್ ನಿಂದ ದಂಡ Read More »

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಅಖಾಡದಲ್ಲಿ ಇಂದು ಜೆಡಿಎಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದ್ಯ ಬಿಡುಗಡೆಯಾಗಿರುವ ಪಟ್ಟಿಯಲ್ಲಿ 59 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ​​ ಬಿಜೆಪಿ ಮತ್ತು ಕಾಂಗ್ರೆಸ್​ನಿಂದ ಪಕ್ಷಾಂತರ ಮಾಡಿದ ಹಲವು ನಾಯಕರು ಪ್ರಾದೇಶಿಕ ಪಕ್ಷದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ನಗರ, ಮಂಡ್ಯ, ವರುಣಾ, ರಾಜಾಜಿನಗರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ 12 ಅಭ್ಯರ್ಥಿಗಳನ್ನು ಬದಲಾವಣೆ ಮಾಡಿದೆ. ಅಭ್ಯರ್ಥಿಗಳ ವಿವರ ಹೀಗಿದೆ…ನಿಪ್ಪಾಣಿ- ರಾಜು ಮಾರುತಿ ಪವಾರ್​ಚಿಕ್ಕೋಡಿ ವಿಧಾನಸಭಾ

ಜೆಡಿಎಸ್ ನಿಂದ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ| ಲಿಸ್ಟ್ ನಲ್ಲಿ ಪಕ್ಷಾಂತರಿಗಳಿಗೆ ಮಣೆ Read More »

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ

Samagra news: ಸುಳ್ಯ ವಿಧಾನ ಸಭಾ ಕ್ಷೇತ್ರದ ಜೆ ಡಿ ಎಸ್ ಅಭ್ಯರ್ಥಿಯಾಗಿ ಹೆಚ್ ಎಲ್ ವೆಂಕಟೇಶ್ ನಾಮಪತ್ರವನ್ನು ಚುನಾವಣಾಧಿಕಾರಿ ಅರುಣ್ ಕುಮಾರ್ ಸಂಗಾವಿಯವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆ ಡಿ ಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ,ತಾಲೋಕು ಅದ್ಯಕ್ಷ ಸುಕುಮಾರ್ ಕೊಡ್ತುಗಳಿ, ಮೀರಾ ಸಾಹೇಬ್ ಕಡಬ,ಅಗ್ರಹಾರ ದುಗ್ಗಪ್ಪ ಮೊದಲದವರಿದ್ದರು ಉಪ ಚುನಾವಣಾಧಿಕಾರಿ ಮಂಜುನಾಥ್, ರಮೇಶ್ ಬಾಬು ನಿಯಮವನ್ನು ತಿಳಿಸಿದರು. ಇದಕ್ಕೂ ಮೊದಲು ರಥಬೀದಿಯಿಂದ ಕಾರ್ಯಕರ್ತರ ಜೊತೆ ಕಾಲ್ನಡಿಗೆ ಜಾಥಾ ನಡೆಸಿದರು. ಈ ಸಂದರ್ಭ

Sullia: ಜೆಡಿಎಸ್ ಅಭ್ಯರ್ಥಿಯಿಂದ ನಾಮ ಪತ್ರ ಸಲ್ಲಿಕೆ Read More »