April 2023

ಉಡುಪಿ: ಸಿಎಂ ಬೊಮ್ಮಾಯಿ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ

ಸಮಗ್ರ ನ್ಯೂಸ್: ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 12ರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ […]

ಉಡುಪಿ: ಸಿಎಂ ಬೊಮ್ಮಾಯಿ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಅವಘಡ Read More »

ಮಡಿಕೇರಿ: ಹಿರಿಯ ವಕೀಲ, ವಿಎಚ್ ಪಿ ಮುಖಂಡ‌ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ

ಸಮಗ್ರ ನ್ಯೂಸ್: ಮಡಿಕೇರಿಯ ಹಿರಿಯ ವಕೀಲ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣಮೂರ್ತಿ ಎಂಬವರ ಮೇಲೆ ಕಳೆದ ರಾತ್ರಿ ಗುಂಡಿನ ದಾಳಿ ನಡೆದಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಚೆಟ್ಟಲ್ಲಿ ಹತ್ತಿರದ ಅಭ್ಯಾಲ ಬಳಿ ಕೃಷ್ಣಮೂರ್ತಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಕೃಷ್ಣಮೂರ್ತಿ ಚಲಿಸುತ್ತಿದ್ದ ಕಾರಿಗೆ ಗುಂಡು ತಗುಲಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಡಗು ಜಿಲ್ಲಾ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಮಡಿಕೇರಿ: ಹಿರಿಯ ವಕೀಲ, ವಿಎಚ್ ಪಿ ಮುಖಂಡ‌ ಕೃಷ್ಣಮೂರ್ತಿ ಕಾರಿನ ಮೇಲೆ ಗುಂಡಿನ ದಾಳಿ Read More »

Elephant resque: ಸುಳ್ಯ: ಕೆರೆಗೆ ಬಿದ್ದ ಕಾಡಾನೆಗಳ ಕಾರ್ಯಾಚರಣೆ ಯಶಸ್ವಿ| ಮತ್ತೆ ಕಾಡಿನತ್ತ ಮರಳಿದ ಗಜಪಡೆ

ಸಮಗ್ರ ನ್ಯೂಸ್: ಯಶಸ್ವೀ ಕಾರ್ಯಾಚರಣೆಯ ಮೂಲಕ ನಾಡಿಗೆ ಬಂದು ತೋಟದ ಕೆರೆಗೆ ಬಿದ್ದು ಪರದಾಡಿದ ಕಾಡಾನೆಗಳನ್ನು ರಕ್ಷಣೆ ಮಾಡಲಾಗಿದೆ. ಸುಳ್ಯ ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಹಾಗು ಜಿಲ್ಲಾ ಪಂಚಾಯ್ ಮಾಜಿ ಸದಸ್ಯ ನವೀನ್ ಕುಮಾರ್ ರೈ ಮೇನಾಲ ಅವರ ನೇತೃತ್ವದಲ್ಲಿ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿ ಅಜ್ಜಾವರದ ತುದಿಯಡ್ಕದಲ್ಲಿ‌ ಕೆರಯಲ್ಲಿ‌ ಸಿಲುಕಿದ್ದ ಆನೆಗಳನ್ನು ಮೇಲಕ್ಕೆ ತರಲಾಯಿತು. ಸ್ಥಳೀಯರು ಕೆರೆಯ ಬದಿಯಲ್ಲಿ ಅಗೆತ ಮಾಡಿ ಮಣ್ಣು, ಮರಳು ಕಲ್ಲು ಹಾಕಿ ಆನೆಗಳಿಗೆ ಮೇಲೆ ಬರಲು

Elephant resque: ಸುಳ್ಯ: ಕೆರೆಗೆ ಬಿದ್ದ ಕಾಡಾನೆಗಳ ಕಾರ್ಯಾಚರಣೆ ಯಶಸ್ವಿ| ಮತ್ತೆ ಕಾಡಿನತ್ತ ಮರಳಿದ ಗಜಪಡೆ Read More »

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿ ನಡೆಸಿದರು. ಈ ವೇಳೆ ಅವರಿಗೆ ಹುಲಿಗಳೇ ಕಾಣದಿರುವುದಕ್ಕೆ ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತು ಆತನ ವಾಹನದ ನೋಂದಣಿ ರದ್ದುಪಡಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಬಿಜೆಪಿಯ ಕೆಲವು ಮುಖಂಡರು ಒತ್ತಡ ಹೇರುತ್ತಿದ್ದಾರೆ. ಆದರೆ ಪ್ರಧಾನಿ ಮತ್ತು ಅರಣ್ಯ ಅಧಿಕಾರಿಗಳು ಭದ್ರತಾ ತಂಡಗಳನ್ನು ದೂಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಅವರು 22 ಕಿಲೋಮೀಟರ್ ಸಫಾರಿ ನಡೆಸಿದರೂ ಒಂದೇ ಒಂದು ಹುಲಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ| ಹುಲಿ ಕಾಣದ್ದಕ್ಕೆ ಸಫಾರಿ ವಾಹನ ಚಾಲಕನ ಮೇಲೆ ಕ್ರಮಕ್ಕೆ ಒತ್ತಡ Read More »

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂದು(ಎ.13) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(UGC NET) ಫಲಿತಾಂಶ ಪ್ರಕಟವಾಗಲಿದೆ ಎಂದು UGC ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. 83 ವಿಷಯಗಳಿಗೆ ಐದು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. 8.34 ಲಕ್ಷ ಅಭ್ಯರ್ಥಿಗಳು ಈ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜನ್ಸಿ (NTA) ಅಧಿಕೃತ ವೆಬ್‌ಸೈಟ್ ugcntet.nta.nic.in ಅಥವಾ ntaresults.nic.in ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ Read More »

ಸೌದಿಯಲ್ಲಿ ಅಪಘಾತಕ್ಕೆ ಕಾಪುವಿನ ಯುವಕ ಬಲಿ

ಸಮಗ್ರ ನ್ಯೂಸ್: ಎರಡು ವಾರದ ಹಿಂದೆ ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಡುಪಿ ಜಿಲ್ಲೆಯ ಕಾಪು ನಿವಾಸಿಯೊಬ್ಬರು ಅಲ್ಲಿನ ಜುಬೈಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಕಾಪು ಸಮೀಪದ ಮಜೂರು ಕೊಂಬಗುಡ್ಡೆ ನಿವಾಸಿ ಮುಹಮ್ಮದ್ ರಿಯಾಝ್(27) ಮೃತಪಟ್ಟ ದುರ್ದೈವಿ. ಮಾರ್ಚ್ 25ರಂದು ಜುಬೈಲ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಜುಬೈಲ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರವಿವಾರ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು

ಸೌದಿಯಲ್ಲಿ ಅಪಘಾತಕ್ಕೆ ಕಾಪುವಿನ ಯುವಕ ಬಲಿ Read More »

ನೆಟ್ ಪ್ಲಿಕ್ಸ್ ಸೀರೀಸ್ ನಟಿ ಜಂಗ್ ಚೇ-ಯುಲ್ ಸಾವು| 26ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ ವೆಬ್ ಸೀರೀಸ್ ತಾರೆ

ಸಮಗ್ರ ನ್ಯೂಸ್: ದಕ್ಷಿಣ ಕೊರಿಯಾದ ಸಿರೀಸ್‌ಗಳಲ್ಲಿ ನಟಿಸಲು ಹೆಸರುವಾಸಿಯಾಗಿದ್ದ ನಟಿ ಜಂಗ್ ಚೇ-ಯುಲ್ ಅವರು 26 ನೇ ವಯಸ್ಸಿಗೇ ನಿಧನರಾದರು ಎಂದು ವರದಿಯಾಗಿದೆ. ಜಂಗ್ ಚೇ-ಯುಲ್ ಏಪ್ರಿಲ್ 11 ರಂದು ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅಲ್ಲಿನ ಮಾದ್ಯಮಗಳು ವರದಿ ಮಾಡಿವೆ. ನಟಿ ಚೇ-ಯುಲ್ ಏಪ್ರಿಲ್ 11 ರಂದು ಅಗಲಿದ್ದು, ಅವರ ಅಂತ್ಯಕ್ರಿಯೆಯು ಅವರ ಕುಟುಂಬದವರ ಆಶಯಕ್ಕೆ ಅನುಗುಣವಾಗಿ ಖಾಸಗಿಯಾಗಿ ನಡೆಯಲಿದೆ. ತನ್ನ ನಟನೆಯಲ್ಲಿ ಪ್ರಾಮಾಣಿಕವಾಗಿದ್ದ ಮೃತ ಚೇ-ಯುಲ್ ಗೆ ಅಲ್ಲಿನ ಮಾಧ್ಯಮಗಳು ಶ್ರದ್ಧಾಂಜಲಿ ಸಲ್ಲಿಸಿವೆ.

ನೆಟ್ ಪ್ಲಿಕ್ಸ್ ಸೀರೀಸ್ ನಟಿ ಜಂಗ್ ಚೇ-ಯುಲ್ ಸಾವು| 26ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ ವೆಬ್ ಸೀರೀಸ್ ತಾರೆ Read More »

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್

ಸಮಗ್ರ ನ್ಯೂಸ್: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈ ಬಾರಿ ಬಿಜೆಪಿ ಟಿಕೆಟ್ ನೀಡದೇ ಇದ್ದದ್ದಕ್ಕೆ ಆಕ್ರೋಶವನ್ನು ಹೊರ ಹಾಕಿದ್ದಾರೆ. ರಾಣೆಬೆನ್ನೂರು ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಬುಧವಾರ ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತ್ತ ಕಾಂಗ್ರೆಸ್ ಟಿಕೆಟ್‍ಗೂ ಪ್ರಯತ್ನ ಪಟ್ಟು ನಿರಾಸೆಯಾಗಿದ್ದ ಅವರು, ಇತ್ತ ಬಿಜೆಪಿ ಟಿಕೆಟ್ ಕೂಡಾ ಮಿಸ್ ಆಗಿದ್ದರಿಂದ ಬೇಸರಗೊಂಡಿದ್ದರು. ಈ ಹಿನ್ನಲೆಯಲ್ಲೇ ಎಂಎಲ್ಸಿ ಸ್ಥಾನಕ್ಕೆ

ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಚಿವ ಆರ್.ಶಂಕರ್ Read More »

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆ ಹಿಂಡು

ಸಮಗ್ರ ನ್ಯೂಸ್: ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ. ಇಲ್ಲಿನ ತುದಿಯಡ್ಕ ಎಂಬಲ್ಲಿನ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿರುವುದಾಗಿ ವರದಿಯಾಗಿದೆ. ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆ ಹಿಂಡು Read More »

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು

ಕೇಸರಿ ಕಲಿಗಳ ಎರಡನೇ ಪಟ್ಟಿ ರಿಲೀಸ್| ಮತ್ತೆ 23 ಅಭ್ಯರ್ಥಿಗಳ ಹೆಸರು ಪ್ರಕಟ Read More »