April 2023

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು ಕೈ ಟಿಕೆಟ್ ವಂಚಿತರಾದ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್ ಅವರು ವಿಧಾನಸಭಾ ಚುನಾವಣೆಗೆ ಮೀಸಲು ಕ್ಷೇತ್ರವಾದ ಸುಳ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ನಡೆದ ನಂದಕುಮಾರ್ ಅಭಿಮಾನಿ ಕಾರ್ಯಕರ್ತರ ಕೋರ್ ಕಮಿಟಿ ಸಭೆಯಲ್ಲಿ ನಂದಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಯಿತು. ನಾಮಪತ್ರ ಸಲ್ಲಿಕೆಯ ದಿನಾಂಕವನ್ನು ಏ.12ರಂದು ಪ್ರಕಟಿಸಲಾಗುವುದು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಪಕ್ಷದ ವತಿಯಿಂದ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿ ಯಾಗಿ […]

ಸುಳ್ಯ: ಕೈ ತಪ್ಪಿದ ಕೈ ಟಿಕೆಟ್| ಕೆಪಿಸಿಸಿ ಉಸ್ತುವಾರಿ ಹೆಚ್.ಎಂ ನಂದಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ Read More »

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಬಹುತೇಕ ಬಿಜೆಪಿಯ ಹಿರಿಯರಿಗೆ ಟಿಕೆಟ್ ವಿಚಾರದಲ್ಲಿ ದೊಡ್ಡ ಹಿನ್ನಡೆಯಾಗಿದ್ದು, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಬಿಜೆಪಿ ಅವರನ್ನು ಕಡೆಗಣಿಸಿದೆ ಎನ್ನಲಾಗಿದೆ. ಕರಡು ಪಟ್ಟಿಯಲ್ಲಿನ ಬಹುತೇಕ ಅಭ್ಯರ್ಥಿಗಳಿಗೆ ಬಿಎಸ್‌ವೈ ಅನುಮೋದನೆ ನೀಡಿದ್ದು, ಅದಾದ ಬಳಿಕ ಪರಿಷ್ಕರಣೆ ವೇಳೆ ರಾಜಾಹುಲಿಯ‌ನ್ನು ಕಡೆಗಣಿಸಲಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮೇಲುಗೈ ಸಾಧಿಸಿದ್ದು, ಹಿರಿಯರು ಬಿಜೆಪಿಯಲ್ಲಿ ಮೂಲೆಗುಂಪಾಗಿದ್ದಾರೆ. ಯಡಿಯೂರಪ್ಪನವರ ಅನುಪಸ್ಥಿತಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ನಳಿನ್ ಕುಮಾರ್ ಮೇಲುಗೈ| ಬಿಎಸ್ವೈ ಸೇರಿದಂತೆ ಹಿರಿಯ ನಾಯಕರ ಕಡೆಗಣನೆ Read More »

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು

ಸಮಗ್ರ ನ್ಯೂಸ್: ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಬಿಗ್ ಶಾಕ್, ಮುಂದಿನ ಎರಡು ದಿನ ರಾಜ್ಯದಲ್ಲಿ ತಾಪಮಾನ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕ್ಷೀಣಿಸುತ್ತಿರುವ ಸೂಚನೆ ಬೆನ್ನಲ್ಲೇ ಬಿಸಿಲ ತಾಪಮಾನ ಹೆಚ್ಚಳವಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 2 ರಿಂದ 3 ಡಿಗ್ರಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ

ಹವಾಮಾನ ವರದಿ: ಇನ್ನೆರಡು ದಿನ ಉರಿಬಿಸಿಲು Read More »

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ

ಸಮಗ್ರ ನ್ಯೂಸ್: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ

ಸಚಿವ ಅಂಗಾರರಿಗೆ ಕೋಕ್| ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ| ಶುರುವಾಯ್ತು ರಾಜೀನಾಮೆ ಪರ್ವ Read More »

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಇದರಲ್ಲಿ ಹಾಲಿ ಸಚಿವ ಹಾಗೂ ಸುಳ್ಯ ಶಾಸಕ ಎಸ್.ಅಂಗಾರ ಹಾಗೂ ಪುತ್ತೂರು ಹಾಲಿ ಶಾಸಕ ಸಂಜೀವ ಮಠಂದೂರಿಗೆ ಕೊಕ್ ನೀಡಲಾಗಿದ್ದು, ಇಬ್ಬರು ಮಹಿಳಾ ಅಭ್ಯರ್ಥಿಗಳು ಸೇರಿ 8 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ದ.ಕ ಜಿಲ್ಲೆಯ ಬಿಜೆಪಿ

ಸುಳ್ಯದ ಬಂಗಾರ ಲಾಕರ್ ಗೆ ಶಿಪ್ಟ್| ಸಂಜೀವ ಮಠಂದೂರಿಗೂ ಕೋಕ್| ಇಲ್ಲಿದೆ ದ.ಕ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ Read More »

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗಾಗಿ 189 ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ. ಒಟ್ಟು 224 ಕ್ಷೇತ್ರಗಳ‌ ಪೈಕಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪಟ್ಟಿ ರಿಲೀಸ್ ಮಾಡಿದ್ದು, 35 ಕ್ಷೇತ್ರಗಳ ಟಿಕೆಟ್ ಬಾಕಿ ಉಳಿಸಿಕೊಂಡಿದೆ. ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದ್ದು, ಸಿಎಂ ಬೊಮ್ಮಾಯಿಗೆ ಸ್ವಕ್ಷೇತ್ರ ಶಿಗ್ಗಾವಿ ನೀಡಲಾಗಿದೆ. ಬಿಜೆಪಿ‌ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದವರ ಪಟ್ಟಿ

189 ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್| 35 ಕ್ಷೇತ್ರಗಳಿಗೆ ಟಿಕೆಟ್ ಬಾಕಿ Read More »

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು?

ಸಮಗ್ರ ನ್ಯೂಸ್: ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಹಿರಿಯ ನಾಯಕರಿಗೆ ಟಿಕೆಟ್ ನೀಡದೇ, ಹೊಸಬರಿಗೆ ಹಾಗೂ ಯುವಕರಿಗೆ ಮಣೆ ಹಾಕಲಾಗಿತ್ತು. ಅದೇ ಮಾದರಿ, ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ, ರಾಜ್ಯಕ್ಕೂ ಕಾಲಿಟ್ಟಿದೆ ಎನ್ನಲಾಗುತ್ತಿದೆ. ಬಿಜೆಪಿ ಹೈಕಮಾಂಡ್ ಹಿರಿಯರಿಗೆ ಕೋಕ್ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಸುಳಿವಿನಿಂದಲೇ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲೂ ಗುಜರಾತ್ ಮಾದರಿನ್ನೇ ಅನುಸರಿಸೋದಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನಲಾಗುತ್ತಿದೆ. ರಾಜ್ಯದ ಬಿಜೆಪಿಯ ಹಿರಿಯ ನಾಯಕರಿಗೆ ಹೈಕಮಾಂಡ್

ಇವರೆಲ್ಲಾ ಯಾಕೆ ಚುನಾವಣಾ ನಿವೃತ್ತಿ ತಗೊಂಡ್ರು ಗೊತ್ತಾ? ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡ್ರಾ ಈ ನಾಯಕರು? Read More »

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ಸಮಗ್ರ ನ್ಯೂಸ್: ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ ನೀರಿನಲ್ಲಿ ಮುಳುಗಿ ಕಂದಮ್ಮಗಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅಡೂರು ದೇವರಡ್ಕದ ನಿವಾಸಿ ಶಾಫಿ ಎಂಬವರ ಪುತ್ರ ಮುಹಮ್ಮದ್ ಆಶೀಕ್ (7) ಮತ್ತು ಹಸೈನಾರ್ ರವರ ಪುತ್ರ ಮುಹಮ್ಮದ್ ಫಾಸಿಲ್(9) ನೀರಿನಲ್ಲಿ ಮುಳುಗಿ ಮೃತಪಟ್ಟವರು . ಮೃತದೇಹಗಳನ್ನು ಕಾಸರಗೋಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಸುಳ್ಯ: ಹೊಳೆಗೆ ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು Read More »

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಚುನಾವಣೆ ದಿನಾಂಕ ನಿಗದಿಯಾಗಿ ವಾರ ಕಳೆದರೂ ಭಾರತೀಯ ಜನತಾ ಪಕ್ಷ ಮಾತ್ರ ಇನ್ನು ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕಳೆದೆಲ್ಲ ಚುನಾವಣೆಗೆ ಹೋಲಿಸಿದರೆ ಅಭ್ಯರ್ಥಿ ಆಯ್ಕೆಗೆ ನಾನಾ ರೀತಿಯ ಕಸರತ್ತು, ಮ್ಯಾರಥಾನ್ ಮೀಟಿಂಗ್ ಗಳು ನಡೆಯುತ್ತಿರುವುದು ಇದೆ ಮೊದಲು ಅಂತಾನೆ ಹೇಳಬಹುದು. ಕೇಸರಿ ಪಾಳಯದಲ್ಲಿ ಅಭ್ಯರ್ಥಿಯಾಗುವುದಕ್ಕೇನು ಕೊರತೆ ಇಲ್ಲ. ಲಕ್ಷಾಂತರ ಕಾರ್ಯಕರ್ತರನ್ನು ಹೊಂದಿದ ಪಕ್ಷ ಅಂದರೆ ಅದು ಭಾರತೀಯ ಜನತಾ ಪಾರ್ಟಿ . ಈ ಬಾರಿ ಮಾತ್ರ ಟಿಕೆಟ್ ಹಂಚಿಕೆ ಮಾಡುವಲ್ಲಿ ಮೀನ ಮೇಷ ಎಣಿಸುತ್ತಿರುವ ಬಿಜೆಪಿ

ಇವರಾ ಸುಳ್ಯದ ಬಿಜೆಪಿ ಕ್ಯಾಂಡಿಡೇಟ್? ಮ್ಯಾರಥಾನ್ ಮೀಟಿಂಗ್ ನಲ್ಲಿ ಪ್ರಸ್ತಾಪವಾದ ಹೆಸರಾದ್ರೂ ಯಾವುದು? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸುಳ್ಯ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ ನಗದು ವಶಕ್ಕೆ ಪಡೆದ‌ ಚುನಾವಣಾ ಅಧಿಕಾರಿಗಳು

ಸಮಗ್ರ ನ್ಯೂಸ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣವನ್ನು ಚುಬಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯಿಂದ ವರದಿಯಾಗಿದೆ. ಬ್ಯಾಂಕ್‌ವೊಂದು ತನ್ನ ಎಟಿಎಂಗೆ ಹಣ ತುಂಬಿಸಲು ಲಕ್ಷಾಂತರ ರೂ. ಹಣವನ್ನು ಸಾಗಿಸುತ್ತಿತ್ತು. ಇದನ್ನು ಕಲ್ಲುಗುಂಡಿಯ ಚೆಕ್ ಪೋಸ್ಟ್ ಬಳಿ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ತಡೆಹಿಡಿದಿದ್ದಾರೆ. ಹಣ ಸಾಗಿಸಲು ಅನುಮತಿ ಪಡೆದುಕೊಂಡಿರುವ ದಾಖಲೆಗಳನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಆದರೆ ಅಲ್ಲಿ ಸರಿಯಾದ ದಾಖಲೆಗಳು ಇಲ್ಲದಿರುವುದರಿಂದ ಎಟಿಎಂ ಹಣ ಸಾಗಿಸುತ್ತಿದ್ದ ವಾಹನವನ್ನು

ಸುಳ್ಯ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಲಕ್ಷಾಂತರ ರೂ ನಗದು ವಶಕ್ಕೆ ಪಡೆದ‌ ಚುನಾವಣಾ ಅಧಿಕಾರಿಗಳು Read More »