April 2023

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಸಂಜೆ ವೇಳೆಗೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ […]

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ Read More »

ರಾಹುಲ್ ಗಾಂಧಿ ವಿರುದ್ಧ ತೀರ್ಪು ವಿಚಾರ| ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್ ಮುಖಂಡ

ಚೆನ್ನೈ: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡು ಕಾಂಗ್ರೆಸ್ ಪಕ್ಷದ ನಾಯಕ ಬೆದರಿಕೆ ಹಾಕಿದ್ದು, ಈ ಕುರಿತು ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀರವ್ ಮೋದಿ, ಲಲಿತ್ ಮೋದಿ ಮತ್ತು ಎಲ್ಲಾ ಕಳ್ಳರ ಹೆಸರುಗಳು ಹೇಗೆ ಮೋದಿ ಎಂದು ಟೀಕಿಸಿದರು. ಈ ಹೇಳಿಕೆಗಾಗಿ 2019ರಲ್ಲಿ ರಾಹುಲ್

ರಾಹುಲ್ ಗಾಂಧಿ ವಿರುದ್ಧ ತೀರ್ಪು ವಿಚಾರ| ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್ ಮುಖಂಡ Read More »

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ

ಸಮಗ್ರ ನ್ಯೂಸ್: ವಿದ್ಯಾರ್ಥಿಯೊಬ್ಬ ನೀರುಪಾಲಾಗಿ ನಾಪತ್ತೆಯಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಪಾಲ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಘಟನೆಯಲ್ಲಿ ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬುವರ ಮಗ ಚಿರಾಂತ್ ಶೆಟ್ಟಿ(20) ಎಂದು ತಿಳಿದುಬಂದಿದೆ. ಮಂಗಳೂರಿನ ಬಳ್ಳಾಲ್ ಭಾಗ್ ನ ಶ್ರೀ ದೇವಿ ಕಾಲೇಜ್ ನಲ್ಲಿ ಎರಡನೇ ವರ್ಷದ ಬಿಕಾಂ ಜೊತೆಗೆ ಏವಿಯೇಷನ್‌ ಕೊರ್ಸ ಕಲಿಯುತ್ತಿದ್ದ ಚಿರಾಂತ್ ಶೆಟ್ಟಿ ಪಿಜಿಯಲ್ಲಿ ಉಳಿದುಕೊಂಡಿದ್ದ. ಗುಡ್ ಪ್ರೈಡೆ ರಜೆ ಕಳೆಯಲು

ಕುಂದಾಪುರ: ಫಾಲ್ಸ್ ನಲ್ಲಿ ನೀರಿಗಿಳಿದ ವಿದ್ಯಾರ್ಥಿ ನಾಪತ್ತೆ Read More »

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ

Samagra news: ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ. 10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ Read More »

ಬಂಟ್ವಾಳ: ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದ ನಿಧನ

ಸಮಗ್ರ ನ್ಯೂಸ್: ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆಯ ಪದವೀಧರ ಕಲಾವಿದ ನಲ್ಕ ಜಗದೀಶ(56) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ 21 ವರುಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಥಾನಾಯಕನ ಪಾತ್ರ ನಿರ್ವಹಿಸುತಿದ್ದರು. ಪೋಷಕ ಪಾತ್ರದಲ್ಲೂ ಸೈ ಎನಿಸಿಕೊಂಡವರು ಭಗವತಿ ಮಹಾತ್ಮೆಯಲ್ಲಿ ಈಶ್ವರನ ಪಾತ್ರ ದೇವಿ ಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜ ಪಾತ್ರನಿರ್ವಹಿಸುತಿದ್ದರು. ಪತ್ನಿ ಹವ್ಯಾಸಿ ಯಕ್ಷಗಾನ ಕಲಾವಿದೆ ಹೇಮಾ, ಒಂದು ಹೆಣ್ಣು, ಒಂದು ಗಂಡು ಮಗುವನ್ನು ಅಗಲಿದ್ದಾರೆ. ಸಸಿಹಿತ್ಲು ಮೇಳದ ಸಂಚಾಲಕ ದಯಾನಂದ ಗುಜರನ್ ಮತ್ತು ರಾಜೇಶ್ ಗುಜರನ್, ಕಲೆ

ಬಂಟ್ವಾಳ: ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದ ನಿಧನ Read More »

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ

Samagra news: ಪತ್ನಿಯು ಪತಿಯನ್ನು ಕಡಿದು ಕೊಲೆಗೈದ ಘಟನೆ ಪಾಣತ್ತೂರಿ ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.ದಿನಂಪ್ರತಿ ಪಾನ ಮತ್ತ ರಾಗಿ ಮನೆಗೆ ಬರುತ್ತಿದ್ದ ಬಾಬು ಶುಕ್ರವಾರ ಸಂಜೆ ಯೂ ಮನೆಗೆ ಬಂದ ಬಳಿಕ ಇಬ್ಬರಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು ಪತ್ನಿಯ ಮೇಲೆ ಹಲ್ಲೆ

ಕಾಸರಗೋಡು: ಪತಿಯನ್ನು ಕಡಿದು ಹತ್ಯೆಗೈದ ಪತ್ನಿ Read More »

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು

ಸಮಗ್ರ ನ್ಯೂಸ್: ಬಿಜೆಪಿಯಿಂದ ಚುನಾವಣಾ ಟಿಕೆಟ್ ಘೋಷಣೆ ಸಮೀಪದಲ್ಲಿರುವಾಗಲೇ ಮಾಜಿ ಸಚಿವ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಖಾಸಗಿ ಫೋಟೋ ವೈರಲ್ ಆಗಿದೆ. ಇನ್ನೆರಡು ದಿನಗಳಲ್ಲಿ‌ ಬಿಜೆಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಫೋಟೋ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಮಾತ್ರವಲ್ಲ ಕಟ್ಟಾಗೆ ಟಿಕೆಟ್ ಕೈತಪ್ಪಿಸಲು ವಿರೋಧಿಗಳು ಖಾಸಗಿ ಫೋಟೋವನ್ನ ಹರಿಬಿಟ್ಟಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಶರ್ಟ್ ಇಲ್ಲದೇ ಮನೆಯಲ್ಲಿ‌ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಳಿತಿರುವ ಫೋಟೋ ಹರಿಬಿಡಲಾಗಿದ್ದು, ಅಶ್ಲೀಲ ಫೋಟೋ ಕೂಡ

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು Read More »

ಮಾಜಿ‌ ಸಂಸದ ದಿ.ಆರ್ ಧ್ರುವನಾರಾಯಣ್ ಪತ್ನಿ ನಿಧನ| ಪತಿ ಅಗಲಿದ 15 ದಿನದಲ್ಲೇ ಸಾವನ್ನಪ್ಪಿದ ವೀಣಾ

ಸಮಗ್ರ ನ್ಯೂಸ್: ಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ. ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮಾರ್ಚ್ 11ರಂದು ಆರ್‌. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಮಾಜಿ‌ ಸಂಸದ ದಿ.ಆರ್ ಧ್ರುವನಾರಾಯಣ್ ಪತ್ನಿ ನಿಧನ| ಪತಿ ಅಗಲಿದ 15 ದಿನದಲ್ಲೇ ಸಾವನ್ನಪ್ಪಿದ ವೀಣಾ Read More »

ಖತರ್ನಾಕ್ ವ್ಯಕ್ತಿಗಳ ಸೊಂಟದಲ್ಲಿತ್ತು 7.5 ಲಕ್ಷ ರೂ…!

ಸಮಗ್ರ ನ್ಯೂಸ್: ಚುನಾವಣೆ ಘೋಷಣೆಯಾದ ನಂತರ ರಾಜ್ಯದ ಹಲವು ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡುವ ಕೆಲಸವನ್ನು ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಮಾಡುತ್ತಿದ್ದು, ಈ ವೇಳೆ ಇಬ್ಬರು ಖತರ್ನಾಕ್ ವ್ಯಕ್ತಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೊಸ್ಟ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ತಡೆದು ತಪಾಸಣೆ ನಡೆಸಿದಾಗ ಆತನ ಸೊಂಟದಲ್ಲಿ

ಖತರ್ನಾಕ್ ವ್ಯಕ್ತಿಗಳ ಸೊಂಟದಲ್ಲಿತ್ತು 7.5 ಲಕ್ಷ ರೂ…! Read More »

ಮಂಗಳೂರು: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಘಟನೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಧರ್ಮಕ್ಕೆ ಸೇರಿದ ಕೇರಳದ ಮಣಪ್ಪುರಂ ಮೂಲದ ಯುವತಿ ಫಿದಾ ಫಾತಿಮ ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ಕಾಸರಗೋಡು ಸಂಘ ಪರಿವಾರದ ಕಾರ್ಯಕರ್ತರ ಸಹಾಯದಿಂದ ಅಂತರ್ ಧರ್ಮದ ಜೋಡಿ ಮದುವೆಯಾಗಳು ಸಹಕರಿಸಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮ ಜೋಡಿ ಧರ್ಮದ ಗೋಡೆ ಒಡೆದು ತಮ್ಮ ಪ್ರೀತಿಯನ್ನು ಪರಿಪೂರ್ಣಗೊಳಿಸಿದ್ದಾರೆ. ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.

ಮಂಗಳೂರು: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ Read More »