May 2023

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ

ಸಮಗ್ರ ನ್ಯೂಸ್: ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್‌ ಅನುಸರಿಸುತ್ತಿರುವ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು. ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು […]

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ Read More »

ಕಡಬ: ಬಸ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

ಸಮಗ್ರ ನ್ಯೂಸ್: ಮೇ.25ರಂದು ಆಲಂಕಾರಿನಲ್ಲಿ ಚಲಿಸುತ್ತಿದ್ದ ಕೆ.ಎಸ್ ಆರ್.ಟಿ.ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಾರದಾ ನಗರದ ಗುಲಾಬಿ ಮೃತಪಟ್ಟ ಮಹಿಳೆ. ಗೋಳಿತ್ತಡಿ ಎಂಬಲ್ಲಿಂದ ಬಸ್ಸ್‌ ನಲ್ಲಿ ಬಂದ ಮಹಿಳೆ ಆಲಂಕಾರಿನ ಮುಖ್ಯ ಪೇಟೆ ಸಮೀಪಿಸುತ್ತಿದಂತೆ ಬಸ್ಸಿನಿಂದ ಕೆಳಗೆ ಬಿದ್ದಿದ್ದರು. ಬಸ್ಸಿನಿಂದ ಮಾರ್ಗಕ್ಕೆ ಬಿದ್ದ ಪರಿಣಾಮ ತಲೆಗೆ ಗಾಯವಾಗಿತ್ತು. ತಕ್ಷಣ ಅವರಿಗೆ ಸ್ಥಳೀಯ ಕ್ಲಿನಿಕ್‌ ನಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ

ಕಡಬ: ಬಸ್ ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು Read More »

ಉಜಿರೆ: ರಾಷ್ಟ್ರಮಟ್ಟದ ಯುವ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ವಿದ್ಯಾರ್ಥಿ ದಿಸೆಯಲ್ಲಿ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದರು. ಹೃದಯ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಅವರು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಳ್ತಂಗಡಿ

ಉಜಿರೆ: ರಾಷ್ಟ್ರಮಟ್ಟದ ಯುವ ವಾಲಿಬಾಲ್ ಆಟಗಾರ್ತಿ ಹೃದಯಾಘಾತದಿಂದ ಸಾವು Read More »

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ!

ಸಮಗ್ರನ್ಯೂಸ್ : ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಧೀರಜ್ (30 ವ) ಮೇ.30ರಂದು ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಮೃತರು ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ವಿಟ್ಲ: ಅಳಕೆಮಜಲು ನಿವಾಸಿ ಧೀರಜ್ ನೇಣುಬಿಗಿದು ಆತ್ಮಹತ್ಯೆ! Read More »

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ‌ಮುಂಗಾರು ಪೂರ್ವ ಮಳೆ ಆರ್ಭಟ‌ ಮುಂದುವರೆದಿದ್ದು ಮಡಿಕೇರಿ, ಮೈಸೂರು, ಹಾಸನ, ಕೊಪ್ಪಳ, ಬೆಳಗಾವಿ, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಹಲವೆಡೆ ಮಂಗಳವಾರವೂ ಧಾರಾಕಾರ ಮಳೆಯಾಗಿದೆ. ರಾಜ್ಯದಲ್ಲಿ ಸಿಡಿಲಿಗೆ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಹಲವೆಡೆ ಜಾನುವಾರುಗಳೂ ಸಾವನ್ನಪ್ಪಿವೆ. ಮಳೆ‌ ಅವಾಂತರಕ್ಕೆ ಕೃಷಿ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕಕಮರಿಯ ಗ್ರಾಮದ ಅಮೂಲ್‌ ಜೈಸಿಂಗ್‌ (24) ಹಾಗೂ ದೇಸರಹಟ್ಟಿಯ ವಿಠ್ಠಾಬಾಯಿ ಕಮಕಾರ (50) ಸಿಡಿಲು ಬಡಿದು

ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ; ಸಿಡಿಲಿಗೆ ಇಬ್ಬರು ಬಲಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು”

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ ಶಾಲೆ ಪ್ರಾರಂಭೋತ್ಸವಕ್ಕೆ ಎಲ್ಲಾ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಮತ್ತು ಮಂಗಳವಾರ ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು” Read More »

ಕುಕ್ಕೆ ಸುಬ್ರಹ್ಮಣ್ಯ: ಗಜರಾಣಿ ಯಶಸ್ವಿ ಈಗ ಗಾಯಾಳು| ಡ್ರೈನೇಜ್ ನ ಸ್ಲಾಬ್ ಮುರಿದು ಏಟು ಮಾಡಿಕೊಂಡ ಆನೆ

ಸಮಗ್ರ ನ್ಯೂಸ್: ಯಾತ್ರಾಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುವ ಭಕ್ತರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಆನೆ ಯಶಸ್ವಿ ಇದೀಗ ಕಾಲುನೋವಿನಿಂದ ಬಳಲುತ್ತಿದೆ. ತುಂಟಾಟದಿಂದಲೇ ಗಮನ ಸೆಳೆಯುವ ಈ ಆನೆ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಯಶಸ್ವಿ ಈಗ ನಡೆದಾಡಲು ಪರದಾಡುತ್ತಿದೆ. ಸೋಮವಾರ ಮಧ್ಯಾಹ್ನ ಆದಿ ಸುಬ್ರಮಣ್ಯ ಬಳಿ ಸಾಗುತ್ತಿದ್ದಾಗ ಯಶಸ್ವಿ ಡ್ರೈನೇಜ್ ಗಾಗಿ ಹಾಕಿದ್ದ ಕಲ್ಲಿನ ಮೇಲೆ ಕಾಲಿಟ್ಟಿದೆ. ಈ ವೇಳೆ ಕಲ್ಲು ತುಂಡಾಗಿ ಬಿದ್ದು ಅದರ ಕೈಗೆ ಗಾಯವಾಗಿದ್ದು ನಡೆದಾಡಲು ಕಷ್ಟಪಡುತ್ತಿದೆ. ಈಗಾಗಲೇ ಮೈಸೂರಿನ ತಜ್ಞ

ಕುಕ್ಕೆ ಸುಬ್ರಹ್ಮಣ್ಯ: ಗಜರಾಣಿ ಯಶಸ್ವಿ ಈಗ ಗಾಯಾಳು| ಡ್ರೈನೇಜ್ ನ ಸ್ಲಾಬ್ ಮುರಿದು ಏಟು ಮಾಡಿಕೊಂಡ ಆನೆ Read More »

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ‌

ಸಮಗ್ರನ್ಯೂಸ್: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಎಂಬವರನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಎರಡು ದಿನಗಳ ಹಿಂದೆ ಮುಂಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ʼರೋಹನ್ ಕಾರ್ಪೊರೇಷನ್ʼ ಆಡಳಿತ ನಿರ್ದೇಶಕ ರೋಹನ್ ಮುಂತೇರು ಮತ್ತು ತೊಕ್ಕೊಟ್ಟಿನ ಹರ್ಷ ಫೈನಾನ್ಸ್ ಮಾಲಕ ಹರೀಶ್ ಎಂಬವರಿಗೆ, 1. 75 ಕೋಟಿ ರೂಗಳನ್ನು ವಿಶ್ವನಾಥ್ ಶೆಟ್ಟಿ

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ್ ಶೆಟ್ಟಿ ಬಂಧನ‌ Read More »