ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸಾವು

ಸಮಗ್ರ ನ್ಯೂಸ್: ಕೆಂಪಿಮಜಲು ನೇತ್ರಾವತಿ ನದಿಯ ಸನ್ಯಾಸಿ ಕಯ ಎಂಬಲ್ಲಿ ಸಂಬಂಧಿಕನ ಜೊತೆ ಮೀನು ಹಿಡಿಯಲು ತೆರಳಿದ್ದ ಕಾಲೇಜು ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವರದಿಯಾಗಿದೆ.

Ad Widget ... ..

ಮೃತಪಟ್ಟ ವಿದ್ಯಾರ್ಥಿಯನ್ನು ಬಜತ್ತೂರು ನಿವಾಸಿ ಓಡಿಯಪ್ಪ ಮತ್ತು ಗೋಪಿ ಎಂಬವರ ಪುತ್ರ ರೂಪೇಶ್ (17) ಎಂದು ಗುರುತಿಸಲಾಗಿದೆ. ರೂಪೇಶ್ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ.

Ad Widget

ಕಟ್ಟೆಚ್ಚಾರ್ ಎಂಬಲ್ಲಿನ ತನ್ನ ಸಂಬಂಧಿಕರ ಮನೆಗೆ ಹೋಗಿದ್ದ ರೂಪೇಶ್, ಅಲ್ಲಿಂದ ಭಾನುವಾರ ಸಂಬಂಧಿಕ ಅಖಿಲೇಶ್ ಎಂಬಾತನೊಂದಿಗೆ ನೇತ್ರಾವತಿ ನದಿಯ ಸನ್ಯಾಸಿ ಕಯದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಎಂದು ತಿಳಿದುಬಂದಿದೆ. ಈ ವೇಳೆ ರೂಪೇಶ್ ನೀರಿನಲ್ಲಿ ಮುಳುಗಿದ್ದು, ಜೊತೆಗಿದ್ದ ಅಖಿಲೇಶ್ ಆತನನ್ನು ನೀರಿನಿಂದ ಮೇಲೆತ್ತಿ ಆಸ್ಪತ್ರೆಗೆ ದಾಖಲಿಸಿದರೂ ರೂಪೇಶ್ ಬದುಕುಳಿಯಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *