Ad Widget .

ಬೆಂಗಳೂರಿನಲ್ಲಿ ಭಾರೀ ಮಳೆ; ಕೆರೆಯಂತಾದ ರಸ್ತೆಗಳು

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಬೆಂಗಳೂರು ಮಹಾನಗರದ ಹಲವೆಡೆ ವರ್ಷಧಾರೆಯಾಗಿದೆ . ಬೆಳಗ್ಗೆ ನಗರದ ಹಲವೆಡೆ ಮೋಡಕವಿದ ವಾತಾವರಣ ಇತ್ತು.

Ad Widget . Ad Widget .

ಮಧ್ಯಾಹ್ನದ ವೇಳೆಗೆ ಸುಡು ಬಿಸಿಲು ಆರಂಭವಾಗಿದ್ದರೂ ಸಂಜೆ ಹೊತ್ತಿಗೆ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಏಕಾಏಕಿ ಸುರಿದ ಮಳೆಗೆ ನಗರದ ಹಲವು ರಸ್ತೆಗಳು ಕೆರೆಯಂತಾದವು. ವಾಹನ ಸವಾರರು ಸಂಚಾರಕ್ಕೆ ಪರದಾಟ ನಡೆಸಿದರು.

Ad Widget . Ad Widget .

ಭಾನುವಾರ ಸಂಜೆ ನಗರದ ಕಾರ್ಪೊರೇಷನ್ ವೃತ್ತ, ಮೈಸೂರು ಬ್ಯಾಂಕ್ ವೃತ್ತ, ಮೆಜೆಸ್ಟಿಕ್​, ರಾಜಾಜಿನಗರ, ವಿಜಯನಗರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಶ್ರೀನಗರ, ಗಿರಿನಗರ, ಹೆಬ್ಬಾಳ, ಆರ್.ಟಿ.ನಗರ, ಶಾಂತಿನಗರ, ಮತ್ತಿಕೆರೆ, ಮಲ್ಲೇಶ್ವರಂ, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ.

ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲವೊಂದು ರಸ್ತೆಗಳು ನೀರು ತುಂಬಿ ಕೆರೆಯಂತಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಡಾಯಿತು. ದ್ವಿಚಕ್ರ ವಾಹನ ಸವಾರರು ರಸ್ತೆ ಬದಿ ಬೈಕ್ ನಿಲ್ಲಿಸಿ ಬಸ್ ನಿಲ್ದಾಣಗಳಲ್ಲಿ ಆಶ್ರಯ ಪಡೆದರು. ಇನ್ನೂ ಕೆಲವರು ಫ್ಲೈಓವರ್​, ಸ್ಕೈವಾಕ್​ಗಳಲ್ಲಿ ಆಶ್ರಯ ಪಡೆಯುವಂತಾಯಿತು. ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *