Ad Widget .

ರಾಜ್ಯದಲ್ಲಿ ಇಂದಿನಿಂದ ಮತ್ತೆರಡು ದಿನ ‘ನಮೋ’ ಪ್ರಚಾರ| ಕಾಂಗ್ರೆಸ್, ಜೆಡಿಎಸ್ ನಿಂದಲೂ ಮತ ಬೇಟೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇಂದು(ಮೇ.2) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರ್ಗಿ, ನಾಳೆ ಮೂಡಬಿದರೆ, ಅಂಕೋಲಾ, ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

Ad Widget . Ad Widget .

ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗಕ್ಕೆ ಆಗಮಿಸಲಿರುವ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ವಿಜಯನಗರ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದು, ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸುವರು. 6.30 ಕ್ಕೆ ಕಲಬುರ್ಗಿಯಲ್ಲಿ ರೋಡ್ ಶೋ ನಡೆಸಿ ವಾಸ್ತವ್ಯ ಹೂಡಲಿದ್ದಾರೆ.

Ad Widget . Ad Widget .

ನಾಳೆ ಬೆಳಗ್ಗೆ ಮಂಗಳೂರಿಗೆ ತೆರಳಲಿರುವ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಚಾಮರಾಜನಗರದಲ್ಲಿ ಕೇಂದ್ರ ಸಚಿವ ಅಮಿತ್ ಶೋ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಆರಂಭಿಸಲಿದ್ದಾರೆ. ಸಿದ್ದರಾಮಯ್ಯ ಭದ್ರಕೋಟೆ ವರುಣಾದ ಮೇಲೆ ಶಾ ಕಣ್ಣಿಟ್ಟಿದ್ದು, ಬೆಳಗ್ಗೆ ಹೊಸಕೋಟೆಯಲ್ಲಿ ಸಮಾವೇಶ ನಡೆಸಲಿದ್ದಾರೆ. ತದನಂತರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.

ಇನ್ನು ದಾವಣಗೆರೆ ಹಾಗೂ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮತಬೇಟೆ ಜೋರಾಗಿದ್ದು, ರಾಹುಲ್ ಗಾಂಧಿ ಎರಡೂ ಕಡೆ ತೆರಳಿ ಮತಯಾಚನೆ ಮಾಡಲಿದ್ದಾರೆ. ಹರಿಹರದಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, ಚಿಕ್ಕಮಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.

Leave a Comment

Your email address will not be published. Required fields are marked *