Ad Widget .

ಕಾಂಗ್ರೆಸ್ ನಿಂದ ಪ್ರಣಾಳಿಕೆ ಬಿಡುಗಡೆ| ಮತದಾರನ ಸೆಳೆಯಲು ‘ಸರ್ವಜನಾಂಗದ ಶಾಂತಿಯ ತೋಟ’ ಹೆಸರಿನಲ್ಲಿ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

Ad Widget . Ad Widget .

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Ad Widget . Ad Widget .

ಚುನಾವಣಾ ಪ್ರಣಾಳಿಕೆ ಬಿಡುಗಡೆ ವೇಳೆ ಮಾತನಾಡಿದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್, ಎಲ್ಲ ಸಮುದಾಯದ, ಎಲ್ಲ ವರ್ಗದವರ ಅಭಿವೃದ್ಧಿಗೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ನಮ್ಮ ಮುಖಂಡರ ಜೊತೆಗೆ ಚರ್ಚಿಸಿ ಪ್ರಣಾಳಿಕೆ ತಯಾರಿಸಿದ್ದೇವೆ. ಸರ್ವಜನಾಂಗದ ಶಾಂತಿಯ ತೋಟ ಕಾಂಗ್ರೆಸ್ ಬದ್ಧತೆ ಈ ಘೋಷ ವಾಕ್ಯದೊಂದಿಗೆ ಪ್ರಣಾಳಿಕೆ ತಯಾರು ಮಾಡಿದ್ದೇವೆ ಎಂದರು.

ಬಿಎಪಿಲ್ ಕಟುಂಬಕ್ಕೆ ಪ್ರತಿ ತಿಂಗಳು 10 ಕೆಜಿ ಅಕ್ಕಿ, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ವಿದ್ಯುತ್ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ, ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ರೂ. ನೀಡಲಾಗುವುದು, ಯುವನಿಧಿ, ನಿರುದ್ಯೋಗ ಭತ್ಯೆ, ಪದವೀಧರರಿಗೆ 3,000 ರೂ. ಡಿಪ್ಲೋಮಾ ಪಡೆದವರಿಗೆ 1,500 ರೂ. ನೀಡುವುದಾಗಿ ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *