Ad Widget .

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೆಂದು‌ ಕರಾವಳಿಯ ದೈವ ದೇವರುಗಳಿಗೆ ಮೊರೆಹೋದ‌ ಎಚ್‌ಡಿಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ; ಯಾರು ಸಿಎಂ ಆಗುತ್ತಾರೆ ಎಂಬ ಲೆಕ್ಕಾಚಾರಗಳು ಈಗಲೇ ಶುರುವಾಗಿದೆ. ಈ ನಡುವೆ, ಕುಮಾರಸ್ವಾಮಿ ಮುಂದಿನ ಸಿಎಂ ಆಗಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ಇದೀಗ ತುಳುನಾಡಿನ ದೈವ-ದೇವರ ಮೊರೆ ಹೋಗುವ ಮೂಲಕ ಹರಕೆ ಹೊತ್ತಿದ್ದಾರೆ.

Ad Widget . Ad Widget .

ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಪ್ರಧಾನಿ, ಮಣ್ಣಿನ ಮಗ ಕಾಲಿಗೆ ಚಕ್ರ ಕಟ್ಟಿ ತಿರುಗಾಡುತ್ತಿದ್ದಾರೆ. ತನ್ನ ಇಳಿ ವಯಸ್ಸಿನಲ್ಲೂ ಆರೋಗ್ಯವನ್ನು ಲೆಕ್ಕಿಸದೆ ಮಗನಿಗಾಗಿ ಶ್ರಮಿಸುತ್ತಿದ್ದಾರೆ.

Ad Widget . Ad Widget .

ಮಂಗಳೂರಿಗೆ ಭೇಟಿ ನೀಡಿದ ಸಂದರ್ಭ ಬಜಪೆ ಸುಂಕದಕಟ್ಟೆಯಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ಹರಕೆ ಸಲ್ಲಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಆದರೆ ರಂಗಪೂಜೆ ನೆರವೇರಿಸುವುದಾಗಿ ಹರಕೆ ಹೊತ್ತಿದ್ದಾರೆ. ಬಳಿಕ ಪೆರಾರ ಬ್ರಹ್ಮಬಲಾಂಡಿ ದೈವಸ್ಥಾನಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Leave a Comment

Your email address will not be published. Required fields are marked *