Ad Widget .

ವೇಶ್ಯೆಯರೊಂದಿಗೆ ಲೈಂಗಿಕ ಸಂಪರ್ಕ ಆರೋಪ| ಕ್ರಿಕೆಟಿಗ ಮೊಹಮ್ಮದ್ ಶಮಿ ಬಂಧನಕ್ಕೆ ಸುಪ್ರೀಂಗೆ ಮೊರೆ

ಸಮಗ್ರ ನ್ಯೂಸ್: ಮೊಹಮ್ಮದ್ ಶಮಿ ವಿರುದ್ಧದ ಬಂಧನದ ವಾರೆಂಟ್‌ ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Ad Widget . Ad Widget .

ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ಮಾರ್ಚ್ 28, 2023 ರ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ ವಿರುದ್ಧ ಹೊರಡಿಸಿದ್ದ ಬಂಧನ ವಾರಂಟ್‌ಗೆ ತಡೆ ನೀಡಿತ್ತು. ಸೆಷನ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್ ನಲ್ಲಿ ವಜಾಗೊಳಿಸಲಾಗಿದೆ.

Ad Widget . Ad Widget .

ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರ ಪತ್ನಿ ತಮ್ಮ ವಕೀಲರ ಮೂಲಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ, ಶಮಿ ತನ್ನಿಂದ ವರದಕ್ಷಿಣೆಗೆ ಬೇಡಿಕೆಯಿಡುತ್ತಿದ್ದ. ವೇಶ್ಯೆಯರೊಂದಿಗೆ ಅಕ್ರಮ ವಿವಾಹೇತರ ಲೈಂಗಿಕ ಸಂಬಂಧಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಅರ್ಜಿಯ ಪ್ರಕಾರ, ಆಗಸ್ಟ್ 29, 2019 ರಂದು ಅಲಿಪುರದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರು ಶಮಿ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *