Ad Widget .

ರಾಣಿ ಅಬ್ಬಕ್ಕ ಶಕ್ತಿ ದೇಶದ ಮಹಿಳೆಯರಲ್ಲಿ ಕಾಣುತ್ತಿದೆ| ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಅಭಿಮತ

ಸಮಗ್ರ ನ್ಯೂಸ್: ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ. ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Ad Widget . Ad Widget .

ಮಂಗಳೂರಿನ ಮುಲ್ಕಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಪ್ರಧಾನಿ ನರೇಂದ್ರ ಮೋದಿಯವರು, ರಾಣಿ ಅಬ್ಬಕ್ಕ ಶಕ್ತಿ ಏನೆಂದು ಎಲ್ಲರಿಗೂ ಗೊತ್ತಿದೆ.

Ad Widget . Ad Widget .

ದೇಶದ ಪ್ರತಿ ಮಹಿಳೆಯರಲ್ಲೂ ರಾಣಿ ಅಬ್ಬಕ್ಕ ಕಾಣಿಸ್ತಿದ್ದಾರೆ. ರಾಣಿ ಅಬ್ಬಕ್ಕ ರೀತಿಯ ನಮ್ಮ ಮಹಿಳೆಯರಲ್ಲೂ ಸಾಮರ್ಥ್ಯ ಇದೆ. ಕಾಂಗ್ರೆಸ್​ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇರಲಿಲ್ಲ. ಮಹಿಳೆಯರಿಗಾಗಿ ಶೌಚಾಲಯ ಇರಲಿಲ್ಲ, ಓದಲು ಶಾಲೆಗಳಿರಲಿಲ್ಲ. ಗ್ಯಾಸ್​ ಕೊರತೆ ಇತ್ತು. ಆದರೆ ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ ಎಂದು ಮೋದಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ನಾಯಕರು ನಿವೃತ್ತಿಯ ಹೆಸರು ಹೇಳಿ ಮತ ಕೇಳುತ್ತಿದ್ದಾರೆ. ನೀವೃತ್ತಿ ಆಗುತ್ತಿದ್ದೇವೆ ಮತ ನೀಡಿ ಎಂದು ಕೇಳುತ್ತಿದ್ದಾರೆ. ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಕರ್ನಾಟಕ ಜನರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಬೇಕು. ಕಾಂಗ್ರೆಸ್ ವಿಕಾಸದಕ್ಕೆ ದುಶ್ಮನ್ ಇದ್ದಂತೆ. ಹೀಗಾಗಿ ಈ ಬಾರಿಯ ನಿರ್ಧಾರ, ಬಹುಮತದ ಬಿಜೆಪಿ ಸರ್ಕಾರ ಬರುವಂತೆ ಮಾಡಬೇಕು ಎಂಬುದಾಗಿ ಕರೆ ನೀಡಿದರು.

Leave a Comment

Your email address will not be published. Required fields are marked *