Ad Widget .

ಮತ್ತೊಂದು ಗಂಡಾಂತರದಿಂದ ಪಾರಾದ ಡಿಕೆಶಿ| ಹೆಲಿಪ್ಯಾಡ್ ನಲ್ಲಿ‌ ಕಾಣಿಸಿಕೊಂಡ ಬೆಂಕಿ

ಸಮಗ್ರ ನ್ಯೂಸ್: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ.

Ad Widget . Ad Widget .

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Ad Widget . Ad Widget .

ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಅದೃಷ್ಟವಶಾತ್​ ಹೆಲಿಕಾಪ್ಟರ್​ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.

Leave a Comment

Your email address will not be published. Required fields are marked *