Ad Widget .

“ಕೊಲ್ಲುವುದಾದರೆ ಕೊಂದುಬಿಡಿ” ಎಂದು ಕಣ್ಣೀರಿಟ್ಟ ವಿನೇಶ್ ಪೋಗಟ್| ಪ್ರತಿಭಟನಾ ಕುಸ್ತಿಪಟುಗಳ ಮೇಲೆ‌ ಪೊಲೀಸರಿಂದ ದೌರ್ಜನ್ಯ ಆರೋಪ

ಸಮಗ್ರ ನ್ಯೂಸ್: ದೆಹಲಿಯ ಜಂತರ್ ಮಂತರ್‌ನಲ್ಲಿ ಕೆಲ ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಬುಧವಾರ ರಾತ್ರಿ ದೆಹಲಿ ಪೊಲೀಸ್ ಸಿಬ್ಬಂದಿ, ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Ad Widget . Ad Widget .

ಬುಧವಾರ ತಡರಾತ್ರಿ ಪಾನಮತ್ತ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಡಚುವ ಹಾಸಿಗೆಗಳನ್ನು ತರಲು ಬಯಸಿದಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

Ad Widget . Ad Widget .

ಹಲವು ಕುಸ್ತಿಪಟುಗಳ ತಲೆಗೆ ಪೆಟ್ಟಾಗಿದ್ದು ಇಬ್ಬರಿಗೆ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರ ಪ್ರಕಾರ, ”ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತಲುಪಿದರು. ಪೊಲೀಸರು ಮಧ್ಯಪ್ರವೇಶಿಸಿದಾಗ, ಸಣ್ಣ ವಾಗ್ವಾದ ನಡೆಯಿತು, ನಂತರ ಎಎಪಿ ನಾಯಕ ಮತ್ತು ಇತರ ಇಬ್ಬರನ್ನು ಬಂಧಿಸಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಕೆಲವು ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಕುಡಿದ ಅಮಲಿನಲ್ಲಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಅವರು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ”ಅವರು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದ ಅಪರಾಧ ನಾವೇನೂ ಮಾಡಿಲ್ಲ ಎಂದು ಹೇಳಿದರು. ”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಬಹುದು” ಎಂದು ಫೋಗಟ್ ಅಳುತ್ತಾ ಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

Leave a Comment

Your email address will not be published. Required fields are marked *