ಸಮಗ್ರ ನ್ಯೂಸ್: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಮಾಡುವುದಾಗಿ ಭರವಸೆಯನ್ನು ಘೋಷಿಸಿದೆ. ಈ ಘೋಷಣೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇಂದು ಕೂಡ ಕಾಂಗ್ರೆಸ್ ಈ ಪ್ರಸ್ತಾಪದ ಬಗ್ಗೆ ಹನುಮಾನ್ ಚಾಲೀಸ್ ಪಠಿಸುವ ನಿರ್ಧಾರ ಕೈಗೊಂಡಿದೆ.
ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಬಜರಂಗದಳವನ್ನು ಬ್ಯಾನ್ ಮಾಡುವುದಕ್ಕೆ ಆಗುವುದಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿ ಹೇಳುವ ಮೂಲಕ, ಭಜರಂಗದಳ ನಿಷೇಧ ಪ್ರಸ್ತಾಪದಿಂದ ಕೈ ಹಿಂದೆ ಸರಿದಿರುವುದನ್ನು ಪ್ರಾಸಂಗಿಕವಾಗಿ ಬಿಚ್ಚಿಟ್ಟಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿದೆ ಎಂದು ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರವು ಬಜರಂಗದಳವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬಜರಂಗದಳ ನಿಷೇಧದಿಂದ ಹಿಂದೆ ಸರಿದಂತೆ ತೋರುತ್ತಿದೆ.