ಒಂದೇ ಮನೆಯ ಮೂವರು ಮಹಿಳೆಯರು ಸೇರಿ 6 ಮಂದಿಯನ್ನು ಗುಂಡಿಕ್ಕಿ ಹತ್ಯೆ!

ಸಮಗ್ರ ನ್ಯೂಸ್: ಜಮೀನು ವಿವಾದದ ಗಲಾಟೆಯಲ್ಲಿ ಒಂದೇ ಕುಟುಂಬದ ಆರು ಸದಸ್ಯರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಘಟನೆಯ ಆಘಾತಕಾರಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಈ ವೀಡಿಯೋದಲ್ಲಿ ಇಬ್ಬರು ರೈಫಲ್ ಗಳನ್ನು ಹಿಡಿದು ಇನ್ನೊಂದು ಗುಂಪಿನ ಕಡೆ ಗುಂಡು ಹಾರಿಸಿರುವುದು ದಾಖಲಾಗಿದೆ. ನಂತರ ಕೆಲವರು ಅವರನ್ನು ಕೋಲುಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಧೀರ್ ಸಿಂಗ್ ತೋಮರ್ ಮತ್ತು ಗಜೇಂದ್ರ ಸಿಂಗ್ ತೋಮರ್ ಕುಟುಂಬಗಳ ನಡುವೆ 2013ರಲ್ಲಿ ತ್ಯಾಜ್ಯ ಸುರಿಯುವ ವಿಚಾರದಲ್ಲಿ ಕಳಹವಾಗಿತ್ತು. ಆ ಸಂಧರ್ಭದಲ್ಲಿ ಧೀರ್ ಸಿಂಗ್ ತೋಮರ್ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು. ಈ ವೇಳೆ ಗಜೇಂದ್ರ ಸಿಂಗ್ ತೋಮರ್ ಕುಟುಂಬವು ಗ್ರಾಮದಿಂದ ಪಲಾಯನ ಮಾಡಿತ್ತು.

ಅನಂತರದಲ್ಲಿ ಎರಡು ಕುಟುಂಬಗಳು ನ್ಯಾಯಾಲಯದ ಹೊರಗೆ ರಾಜಿ ಮಾಡಿಕೊಂಡಿದ್ದರು. ಶುಕ್ರವಾರ ಗಜೇಂದ್ರ ಸಿಂಗ್ ತೋಮರ್ ಕುಟುಂಬ ಗ್ರಾಮಕ್ಕೆ ಮರಳಿದ್ದರು. ಈ ವೇಳೆ ಧೀರ್ ಸಿಂಗ್ ತೋಮರ್ ಕುಟುಂಬ ಅವರ ಮೇಲೆ ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ.

ಹತ್ಯೆಯಲ್ಲಿ ಭಾಗಿಯಾಗಿರುವ ಎಂಟು ಮಂದಿಯನ್ನು ಗುರುತಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ವರದಿ ಮಾಡಿದ್ದಾರೆ.

Leave a Comment

Your email address will not be published. Required fields are marked *