ಮೇ.8ಕ್ಕೆ ಎಸ್ಎಸ್ಎಲ್ ಸಿ ‌ಫಲಿತಾಂಶ| ಶಿಕ್ಷಣ ಇಲಾಖೆಯಿಂದ ಮಹತ್ವದ ಸಭೆ

ಸಮಗ್ರ ನ್ಯೂಸ್: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಮೇ 8 ರಂದು ಪ್ರಕಟವಾಗುವ ಸಾಧ್ಯತೆಯಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿದೆ.

. Ad Widget . Ad Widget

ಫಲಿತಾಂಶ ಪ್ರಕಟಗೊಂಡ ನಂತರದಲ್ಲಿ ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ – kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ಕರ್ನಾಟಕ SSLC ಫಲಿತಾಂಶ 2023ವನ್ನು ವೀಕ್ಷಿಸಬಹುದಾಗಿದೆ.

. Ad Widget . . Ad Widget . Ad Widget

ಕೆಎಸ್‌ಇಎಬಿ ಪ್ರಧಾನ ಕಾರ್ಯದರ್ಶಿ ರೇವಣಸಿದ್ದಪ್ಪ ಅವರು ಮಾತನಾಡಿ, ನಾವು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮೇ 8 ರಂದು ಪ್ರಕಟಿಸುವ ಸಾಧ್ಯತೆಯಿದೆ. ಫಲಿತಾಂಶ ಪ್ರಕಟಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಸಭೆ ನಡೆಸಲಿದ್ದೇವೆ. ಸಭೆಯ ನಂತರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದ್ದೇವೆ ಎಂದಿದ್ದಾರೆ.

ಪರೀಕ್ಷಾ ಮಂಡಳಿಯು ಕರ್ನಾಟಕ SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ನಡೆಸಿದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21 ರಂದು ಆರಂಭವಾಗಿದೆ. ಮೇ 10 ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. ಇದಕ್ಕೂ ಎರಡು ದಿನ ಮೊದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶ ಘೋಷಣೆಯಾಗಲಿದೆ. ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Leave a Comment

Your email address will not be published. Required fields are marked *