Ad Widget .

ಮೇ.7: ದ.ಕ ಜಿಲ್ಲೆಯಲ್ಲಿ ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರ

ಸಮಗ್ರ ನ್ಯೂಸ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಭಾನುವಾರ ಕರಾವಳಿ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಿಯಾಂಕಾ ಗಾಂಧಿ ಮಂಗಳೂರಿಗೆ ಬರಲಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

Ad Widget . Ad Widget .

ನಾಳೆ ಮಧ್ಯಾಹ್ನ ಹೆಲಿಕಾಪ್ಟರ್​​ನಲ್ಲಿ ಆಗಮಿಸುವ ಪ್ರಿಯಾಂಕಾ ಗಾಂಧಿ, ಮೂಡಬಿದಿರೆ ಕ್ಷೇತ್ರದ ಮೂಲ್ಕಿಯಲ್ಲಿ ಚುನಾವಣಾ ಮತಬೇಟೆ ನಡೆಸಲಿದ್ದಾರೆ. ಮುಲ್ಕಿಯ ಕೊಳ್ನಾಡುವಿನ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಂಗಳೂರು ಉತ್ತರ, ಮೂಡಬಿದಿರೆ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

Ad Widget . Ad Widget .

ಪ್ರಿಯಾಂಕಾ ಗಾಂಧಿ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಈ ಹಿಂದೊಮ್ಮೆ ಆಗಮಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಮೊದಲ ಬಾರಿಗೆ ಬರುತ್ತಿದ್ದಾರೆ. ಈ ಹಿನ್ನೆಲೆ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿರ್ಧರಿಸಿದೆ. ವಿಧಾನಸಭಾ ಚುನಾವಣಾ ಪ್ರಚಾರ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಗೆ ಈಗಾಗಲೇ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ.

Leave a Comment

Your email address will not be published. Required fields are marked *