ಸಮಗ್ರ ನ್ಯೂಸ್: ಮಾಜಿ ಶಾಸಕರೊಬ್ಬರ ಮೇಲೆ ಹಲ್ಲೆಗೈದು ಅವರ ಮನೆ ದರೋಡೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.
ತರೀಕೆರೆಯ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಮನೆ ಮೇಲೆ ಕೆಲ ದುಷ್ಕರ್ಮಿಗಳು ಬಂದೂಕು, ಮಚ್ಚುನೊಂದಿಗೆ ದಾಳಿ ಮಾಡಿದ್ದಾರೆ. ಮನೆಯ ಬಾಗಿಲು ಮುರಿದು, ಮಾಜಿ ಶಾಸಕರ ಮೇಲೆ ನಡೆಸಿದ್ದಾರೆ. 1ಕೆ.ಜಿಗೂ ಅಧಿಕ ಚಿನ್ನಾಭರಣ, ಹಣ ದರೋಡೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಚುನಾವಣೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಸ್ಥಳಕ್ಕೆ ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗೆ ಶೋಧ ಮುಂದುವರೆದಿದೆ.