ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ನೀಡಿದ್ದ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಡಿ.ಕೆ. ಶಿವಕುಮಾರ್ ಗೆ ನೋಟಿಸ್ ಜಾರಿ ನೀಡಲಾಗಿದೆ.
ವಿವಿಧ ನೇಮಕಾತಿ, ವರ್ಗಾವಣೆಗೆ ಹುದ್ದೆಗಳಿಗೆ ರೇಟ್ ಫಿಕ್ಸ್ ಜಾಹೀರಾತು ನೀಡಲಾಗಿತ್ತು. ಈ ಸಂಬಂಧ ಡಿಕೆಶಿಗೆ ನೋಟಿಸ್ ಜಾರಿ ಮಾಡಲಾಗಿದೆ. ರೇಟ್ ಕಾರ್ಡ್ ಗೆ ಸಂಬಂಧಿಸಿದಂತೆ ಜಾಹೀರಾತು ನೀಡಿದ ಹಿನ್ನೆಲೆಯಲ್ಲಿ ಚುನಾವಣೆ
ನೀತಿ ಸಂಹಿತೆ ಉಲ್ಲಂಘನೆ ಎಂದು ನೋಟಿಸ್ ಜಾರಿ ಮಾಡಲಾಗಿದ್ದು, ಜಾಹೀರಾತು ಸಂಬಂಧ ದಾಖಲೆ ಸಲ್ಲಿಸಲು ಆಯೋಗ ನೋಟಿಸ್ ನೀಡಿದೆ.
ಕರ್ನಾಟಕದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿನ ಭ್ರಷ್ಟಾಚಾರ, ವಿವಿಧ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದ ದರಪಟ್ಟಿಯನ್ನು ಉಲ್ಲೇಖಿಸಿ ಕಾಂಗ್ರೆಸ್ ಪಕ್ಷವು ನೀಡಿದ್ದ ಜಾಹೀರಾತು ಪ್ರಶ್ನಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2019-2023 ಅವಧಿಯ ಅಂಶಗಳನ್ನು ಉಲ್ಲೇಖಿಸಿ ಜಾಹೀರಾತು ಬಿಡುಗಡೆ ಮಾಡಿತ್ತು. ಬಿಜೆಪಿ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ ಎಂದು ಅದರಲ್ಲಿ ಟೀಕಿಸಿತ್ತು.