Ad Widget .

ಮಂಗಳೂರು ಆರ್ ಎಸ್ಎಸ್ ನ ಬಹುದೊಡ್ಡ ವಿಕೆಟ್ ಪತನ| ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಸತೀಶ್ ಪ್ರಭು

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ಮುಖಂಡ ಮಾಜಿ ನಗರಾಧ್ಯಕ್ಷ ಸತೀಶ್‌ ಪ್ರಭು ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್‌ ಲೋಬೋ, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾದರು.

Ad Widget . Ad Widget .

ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿ ಜನಹಿತ ಸಾಧನೆ ಅಸಾಧ್ಯ ಎಂಬುವುದನ್ನು ಮನಗಂಡಿದ್ದೇನೆ. ಆದ್ದರಿಂದ ಯಾವುದೇ ಅಧಿಕಾರ ಆಸೆ, ಆಕಾಂಕ್ಷೆ ಇಲ್ಲದೆ ಕಾಂಗ್ರೆಸ್‌ ಪಕ್ಷವನ್ನು ಸೇರಿದ್ದೇನೆ. ಗೌಡ ಸಾರಸ್ವತ ಬ್ರಾಹ್ಮಣ ಸಮಾಜಕ್ಕೆ ಸೇರಿರುವ ಕಾಂಗ್ರೆಸ್‌ ನಾಯಕರು ಈ ಹಿಂದೆ ಜಿಲ್ಲೆಯಲ್ಲಿ ಅನೇಕ ಸಾಧನೆ ಮಾಡಿ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಮುಂದಿನ ದಿನಗಳಲ್ಲಿ ಗತ ವೈಭವ ಮರಳಿ ತರುವ ಕೆಲಸ ಮಾಡುತ್ತೇವೆ ಎಂದರು.

Ad Widget . Ad Widget .

ಬಾಲ್ಯದಿಂದಲೇ ಆರ್‌ಎಸ್‌ಎಸ್‌ ಗರಡಿಯಲ್ಲಿ ಬೆಳೆದ ಸತೀಶ್ ಪ್ರಭು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸಂಘಟನಾ ಚತುರರಾಗಿದ್ದರು. ಕೆಲ ವರ್ಷಗಳಿಂದ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯದಿಂದ ಮನನೊಂದು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Leave a Comment

Your email address will not be published. Required fields are marked *