ಸಮಗ್ರ ನ್ಯೂಸ್: ಮಣಿಪುರದಲ್ಲಿ ನಡೆದ ಪ್ರತಿಭಟನಾ ಕಿಡಿಗೆ ಇಲ್ಲಿಯವರೆಗೆ 54 ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಎಸ್ಟಿ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಸಮುದಾಯಗಳು ಪ್ರತಿಭಟನೆ ನಡೆಸುತ್ತಿದ್ದವು.
ಮಣಿಪುರ ಸಹಜ ಸ್ಥಿತಿಗೆ ಮರಳಿದೆ. ಮತ್ತೆ ಎಂದಿನಂತೆ ಜನ ಜೀವನ ಸಹಜ ಸ್ಥಿತಿಗೆ ಬರುತ್ತಿವೆ. ಸೇನಾಪಡೆಗಳು ಹಾಗೂ ಕೇಂದ್ರ ಪೊಲೀಸ್ ಪಡೆಗಳ ಕಾರ್ಯಾಚರಣೆಯಿಂದ ಅಲ್ಲಿನ ಸ್ಥಿತಿ ಗತಿ ಮತ್ತೆ ಸಹಜ ಸ್ಥಿತಿಗೆ ಬರುತ್ತಿದೆ.
ಹಿಂಸಾಚಾರದಲ್ಲಿ ಮೂರೇ ದಿನಗಳಲ್ಲಿ 54 ಜನ ಬಲಿಯಾಗಿದ್ದು, 16 ಮಂದಿಯ ಮೃತದೇಹಗಳನ್ನು ಚುರಾಚಂದ್‌ಪುರ್ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ, 15 ಮೃತದೇಹಗಳನ್ನು ಇಂಪಾಲ್ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರೂ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿರಿಸಲಾಗಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.