ಸಮಗ್ರ ನ್ಯೂಸ್: ಕೇರಳದ ಮಲಪ್ಪುರಂ ಜಿಲ್ಲೆಯ ತನೂರ್ ಪ್ರದೇಶದ ತುವಲ್ತಿರಾಮ್ ಬೀಚ್ ಬಳಿ ಭಾನುವಾರ ಸಂಜೆ ಸುಮಾರು 30 ಪ್ರಯಾಣಿಕರಿದ್ದ ಹೌಸ್ ಬೋಟ್ ಪಲ್ಟಿಯಾಗಿ ಮುಳುಗಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 21 ಮಂದಿ ಸಾವನ್ನಪ್ಪಿದ್ದಾರೆ.
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ತನೂರ್ ಕರಾವಳಿ ಬಳಿ ಪ್ರವಾಸಿ ದೋಣಿ ಮಗುಚಿ ಬಿದ್ದಿದೆ. ಈ ಘಟನೆ ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ. ದೋಣಿಯಲ್ಲಿದ್ದವರೆಲ್ಲರೂ ಪ್ರವಾಸಿಗರಾಗಿದ್ದಾರೆ.
ಈ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಅಗ್ನಿಶಾಮಕ ಮತ್ತು ಪೊಲೀಸ್ ಘಟಕಗಳು, ಕಂದಾಯ ಮತ್ತು ಆರೋಗ್ಯ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ತಾನೂರ್ ಮತ್ತು ತಿರೂರು ಪ್ರದೇಶದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.