Ad Widget .

‘ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದರೆ ನೇಣಿಗೆ ಶರಣು’ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಸವಾಲು

ಸಮಗ್ರ ನ್ಯೂಸ್: ಕುಸ್ತಿಪಟುಗಳು ಹಾಗೂ ಭಾರತೀಯ ಕುಸ್ತಿ ಫೆಡರೇಶನ್‌(ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್‌ ಸಿಂಗ್‌ ನಡುವಿನ ಹಗ್ಗಜಗ್ಗಾಟ ಕೊನೆಗೊಳ್ಳುವಂತೆ ಕಾಣುತ್ತಿಲ್ಲ. ಸವಾಲು-ಪ್ರತಿಸವಾಲು ಮುಂದುವರಿಯುತ್ತಿದ್ದು, ಇದೀಗ ಭೂಷಣ್‌ ವಿಡಿಯೋ ಸಂದೇಶವೊಂದರ ಮೂಲಕ ಮತ್ತೊಂದು ಸವಾಲು ಹಾಕಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಭಾನುವಾರ ವಿಡಿಯೋವೊಂದನ್ನು ಹರಿಬಿಟ್ಟಿರುವ ಭೂಷಣ್‌, ‘ಪ್ರತಿಭಟನಾ ನಿರತ ಕುಸ್ತಿಪಟುಗಳು ತಾವು ಮಾಡಿರುವ ಆರೋಪಗಳ ಪೈಕಿ ಒಂದೇ ಒಂದು ಆರೋಪವನ್ನು ಸಾಬೀತು ಮಾಡಲಿ ಸಾಕು. ನಾನು ನೇಣು ಬಿಗಿದುಕೊಳ್ಳುತ್ತೇನೆ’ ಎಂದಿದ್ದಾರೆ.

Ad Widget . Ad Widget . Ad Widget .

‘ಪ್ರಕರಣವನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಹೆಚ್ಚಿಗೆ ಮಾತನಾಡುವುದಿಲ್ಲ. ಕಳೆದ 11 ವರ್ಷದಲ್ಲಿ ದೇಶದಲ್ಲಿ ಕುಸ್ತಿ ಅಭಿವೃದ್ಧಿಗಾಗಿ ನಾನು ಏನೆಲ್ಲಾ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಯಾವುದಾದರೂ ವಿಡಿಯೋ, ಆಡಿಯೋ, ಸಾಕ್ಷ್ಯಗಳು ಇದ್ದರೆ ಪೊಲೀಸರಿಗೆ ನೀಡಲಿ’ ಎಂದು ಸವಾಲು ಹಾಕಿದ್ದಾರೆ.

Leave a Comment

Your email address will not be published. Required fields are marked *