ತಾಂತ್ರಿಕ ದೋಷದಿಂದ ಮನೆ ಮೇಲೆ ಬಿದ್ದ ಮಿಗ್-21 ವಿಮಾನ| ಮೂವರು ಗ್ರಾಮಸ್ಥರು ಸಾವು

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ MiG-21 ಯುದ್ಧ ವಿಮಾನ ರಾಜಸ್ಥಾನದ ಹನುಮಾನ್‌ಗಢ ಬಳಿ ಪತನಗೊಂಡಿದೆ. ಇದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ.

Ad Widget ... ..

ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ, ವಿಮಾನ ಪೈಲೆಟ್‌ಗಳು ಸುರಕ್ಷಿತವಾಗಿದ್ದಾರೆ. ವಿಮಾನವು ಹನುಮಾನ್‌ಗಢ್ ಜಿಲ್ಲೆಯ ಪಿಲಿಬಂಗಾ ಬಳಿ ತಾಂತ್ರಿಕ ದೋಷದಿಂದಾಗಿ ಸೂರತ್‌ಗಢ ವಾಯುನೆಲೆಯಿಂದ ಟೇಕ್ ಆಫ್ ಆದ ಕೆಲವೇ ಹೊತ್ತಲ್ಲಿ ಪತನಗೊಂಡಿದೆ.

Ad Widget

ಪೈಲಟ್ ಮತ್ತು ಸಹ ಪೈಲಟ್ ಸಕಾಲದಲ್ಲಿ ವಿಮಾನದಿಂದ ಜಿಗಿದರು ಮತ್ತು ಪ್ಯಾರಾಚೂಟ್ ಸಹಾಯದಿಂದ ಡ್ರೈನ್ ಪ್ರದೇಶದಲ್ಲಿ ಸುರಕ್ಷಿತವಾಗಿ ಇಳಿದಿದ್ದಾರೆ. ಆದರೆ, ವಿಮಾನ ಮನೆಯೊಂದರ ಮೇಲೆ ಬಿದ್ದಿದ್ದು, ಮಹಿಳೆ ಮತ್ತು ಪುರುಷ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *