ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಭರದಲ್ಲಿಯೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಶೇ.83.89 ರಷ್ಟು ಫಲಿತಾಂಶ ಲಭ್ಯವಾಗಿದೆ.
SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ ಬರೆದವರಲ್ಲಿ 700619 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ನಾಲ್ಕು ಮಂದಿ ಪೂರ್ಣ ಅಂಕಗಳೊಂದಿಗೆ ಪಾಸಾಗಿದ್ದಾರೆ. 23 ಜಿಲ್ಲೆಗಳಲ್ಲಿ ‘ಎ’ ಗ್ರೇಡ್ ಫಲಿತಾಂಶ ಲಭ್ಯವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದಿದ್ದು, ಮಂಡ್ಯ ದ್ವಿತೀಯ ಸ್ಥಾನ ಪಡೆದಿದೆ
ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
- ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್ ತೆರೆಯಬೇಕು.
- ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
- ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು
- ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.