SSLC ಫಲಿತಾಂಶ ಪ್ರಕಟ| ಈ ಬಾರಿ 83.89 ರಷ್ಟು ವಿದ್ಯಾರ್ಥಿಗಳು ಪಾಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಭರದಲ್ಲಿಯೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಶೇ.83.89 ರಷ್ಟು ಫಲಿತಾಂಶ ಲಭ್ಯವಾಗಿದೆ.

. Ad Widget . Ad Widget . Ad Widget .

SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ ಬರೆದವರಲ್ಲಿ 700619 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ನಾಲ್ಕು ಮಂದಿ‌‌ ಪೂರ್ಣ ಅಂಕಗಳೊಂದಿಗೆ ಪಾಸಾಗಿದ್ದಾರೆ. 23 ಜಿಲ್ಲೆಗಳಲ್ಲಿ ‘ಎ’ ಗ್ರೇಡ್ ಫಲಿತಾಂಶ ಲಭ್ಯವಾಗಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಚಿತ್ರದುರ್ಗ ಪ್ರಥಮ ಸ್ಥಾನ ಪಡೆದಿದ್ದು, ಮಂಡ್ಯ ದ್ವಿತೀಯ ಸ್ಥಾನ ಪಡೆದಿದೆ

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?

  • ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.
  • ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು
  • ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

Leave a Comment

Your email address will not be published. Required fields are marked *