Ad Widget .

ಅಬ್ಬಾ…! ಚುನಾವಣಾ ಅಕ್ರಮದಲ್ಲಿ ಕೋಟಿ ಕೋಟಿ ನಗ-ನಗದು ವಶಕ್ಕೆ ಪಡೆದ ಅಧಿಕಾರಿಗಳು| ಇಲ್ಲಿದೆ ಫುಲ್ ಡೀಟೈಲ್ಸ್…

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಯ ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಈವರೆಗೆ ಚುನಾವಣಾ ಆಯೋಗ 375.60 ಕೋಟಿ ರೂ. ಮೌಲ್ಯದ ನಗದು, ಮದ್ಯ, ಅಕ್ರಮ ವಸ್ತುಗಳನ್ನು ವಶಕ್ಕೆ ಪಡೆದಿದೆ. ಒಟ್ಟು 24.21 ಕೋಟಿ ರೂ. ಮೌಲ್ಯದ ಉಚಿತ ಉಡುಗೊರೆ, 83.66 ಕೋಟಿ ಮೌಲ್ಯದ ಒಟ್ಟು 22.27 ಲಕ್ಷ ಲೀಟರ್ ಮದ್ಯ, 23.66 ಕೋಟಿ ಮೌಲ್ಯದ 1,954 ಕೆಜಿ ಡ್ರಗ್ಸ್ ಹಾಗೂ 96.59 ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯನ್ನು ಜಪ್ತಿ ಮಾಡಿದೆ.

Ad Widget . Ad Widget .

ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 2,896 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ. ಚುನಾವಣೆ ಘೋಷಣೆಯಾದ ದಿನಾಂಕದಿಂದ ಈವರೆಗೆ ಒಟ್ಟು 69,865 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,779 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 11,819 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 17,251 ಜಾಮೀನು ರಹಿತ ವಾರಂಟ್‌ ಜಾರಿಗೊಳಸಲಾಗಿದೆ.

Ad Widget . Ad Widget .

ಅಬಕಾರಿ ಇಲಾಖೆ 3,595 ಗಂಭೀರ ಪ್ರಕರಣ ಹಾಗೂ 3,366 ಮದ್ಯದ ಪರವಾನಿಗೆ ಉಲ್ಲಂಘಿಸಿದ ಪ್ರಕರಣ, 102 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 35,876 ಪ್ರಕರಣಗಳನ್ನು ದಾಖಲಿಸಿದೆ. 2,501 ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಆದಾಯ ತೆರಿಗೆ ಇಲಾಖೆ ಬೆಂಗಳೂರು ನಗರ ಜಿಲ್ಲೆಯ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ರೂ. 1,10,00,000 ನಗದು ಹಾಗೂ 97,56,625 ಮೌಲ್ಯದ 1.855 ಕೆ.ಜಿ ಬಂಗಾರ ವಶಪಡಿಸಿಕೊಂಡಿದೆ. ವಿಚಕ್ಷಣ ದಳ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ರೂ. 2,00,00,000 ನಗದು ವಶಪಡಿಸಿಕೊಂಡಿದೆ. ಅದೇ ರೀತಿ ವಿಚಕ್ಷಣ ದಳ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರೂ. 50,00,000 ನಗದು ವಶಪಡಿಸಿಕೊಂಡಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ವಿಚಕ್ಷಣ ದಳ ರೂ. 25,10,000 ಮೌಲ್ಯದ ಉಚಿತ ಕೊಡುಗೆಗಳನ್ನು ವಶಪಡಿಸಿಕೊಂಡಿದೆ.

Leave a Comment

Your email address will not be published. Required fields are marked *