Ad Widget .

ಮತದಾರರನ್ನು ವಾಹನಗಳಲ್ಲಿ ಕರೆತಂದರೆ ನಿರ್ದಾಕ್ಷಿಣ್ಯ ಕ್ರಮ| ಜಿಲ್ಲಾಧಿಕಾರಿ ರವಿಕುಮಾರ್ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ನಾಳೆ ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಮತದಾನ ನಡೆಸುವ ಮತದಾರರನ್ನು ವಾಹನಗಳ ಮೂಲಕ ಕರೆ ತರಲು ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದವರಿಗೆ ಅವಕಾಶವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ರವಾನಿಸಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರನ್ನು ವಾಹನಗಳಲ್ಲಿ ಕರೆ ತರಲು ಅವಕಾಶವಿಲ್ಲ. ಯಾವುದೇ ಪಕ್ಷ, ಯಾವುದೇ ಅಭ್ಯರ್ಥಿಗಳಿಗೆ ಅವಕಾಶವಿಲ್ಲ. ಅಂತಹ ವಿಚಾರಗಳಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಭಾಗದಿಂದ ನೇರವಾಗಿ ಕರೆ ತರಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

Ad Widget . Ad Widget .

ಒಂದೊಮ್ಮೆ ಇಂತಹ ಸುದ್ದಿಗಳು ಬಂದಲ್ಲಿ ಸಮರ್ಪಕ ಪರಿಶೀಲನೆ ನಡೆಸಲಾಗುವುದು ಹಾಗೂ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸುದ್ಧಿಗೋಷ್ಠಿಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ. ರವಿಕುಮಾರ್ ಎಚ್ಚರಿಸಿದ್ದಾರೆ.

Leave a Comment

Your email address will not be published. Required fields are marked *