Ad Widget .

ರಾಜ್ಯದಲ್ಲಿ ಮೋಚಾ ಚಂಡಮಾರುತ ಅಬ್ಬರ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ| ಇನ್ನೆರಡು ದಿನವೂ ಮುಂದುವರಿಯಲಿದೆ ವರ್ಷಧಾರೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

Ad Widget . Ad Widget .

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವಾಗಲಿದ್ದು, ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಕೂಡ ಬಿರಿಗಾಳಿ ಸಹಿತ ಉತ್ತಮ ಮಳೆಯಾಗುವ ಬಗ್ಗೆ ಸೂಚನೆ ನೀಡಿದೆ. ಕರಾವಳಿ ತೀರ ಪ್ರದೇಶದಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ(ಮೇ. ೮) ಮಧ್ಯಾಹ್ನದಿಂದಲೇ ಕರಾವಳಿ ಹಾಗೂ ದ. ಒಳನಾಡಿನಲ್ಲಿ ಭಾರೀ ಮಳೆಯಾಗಿದೆ. ಮಳೆ ಅವಾಂತರಕ್ಕೆ ಕೊಡಗು ಜಿಲ್ಲೆಯ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ದ.ಕ ಕೊಡಗು, ಚಿಕ್ಕಮಗಳೂರು, ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.

Leave a Comment

Your email address will not be published. Required fields are marked *