Ad Widget .

ಮೇ.10 ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಹಬ್ಬ| 224 ಕ್ಷೇತ್ರಗಳ‌ ಮತದಾರರಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರ ನಾಳೆ ಮತದಾನ ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಮೇ. 10 ರ ನಾಳೆ ರಾಜ್ಯಾದ್ಯಂತ ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, 1.56 ಲಕ್ಷ ಪೊಲೀಸರು ಬಿಗಿ ಭದ್ರತೆ ನಿಯೋಜಿಸಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಟ್ಟು 304 ಡಿವೈಎಸ್ ಪಿಗಳು, 991 ಪಿಐಗಳು, 2610 ಪಿಎಸ್ ಐಗಳು, 5803 ಎಎಸ್ ಐಗಳು,46, 421 ಪೊಲೀಸರು, 27,900 ಗೃಹ ರಕ್ಷಕರು ಸೇರಿದಂತೆ 84.119 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜೊತೆಗೆ ಹೊರ ರಾಜ್ಯಗಳಿಂದ 8,500 ಅಧಿಕಾರಿ, ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ನೇಮಿಸಲಾಗಿದೆ.

Ad Widget . Ad Widget . Ad Widget .

ಈ ದಾಖಲೆಗಳಿದ್ದರೂ ಮತದಾನ ಮಾಡಬಹುದು:
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಮೇ.10 ರಂದು ಮತದಾನ ನಡೆಯಲಿದ್ದು, ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಹಾಗೂ ಭಾರತ ಚುನಾವಣಾ ಆಯೋಗ ನಿಗಧಿಪಡಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂದರ್ಭದಲ್ಲಿ ಅವರು ಹೊಂದಿರುವ ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ಹಾಜರುಪಡಿಸಬೇಕು. ಒಂದು ವೇಳೆ ಅದನ್ನು ಹಾಜರುಪಡಿಸಲು ಸಾಧ್ಯವಿಲ್ಲದಿದ್ದಲ್ಲಿ ಈ ಕೆಳಕಂಡ ಯಾವುದಾದರೂ ಒಂದು ಪರ್ಯಾಯ ದಾಖಲಾತಿಯನ್ನು ಮತದಾರರನ್ನು ಗುರುತಿಸುವುದಕ್ಕಾಗಿ ಹಾಜರು ಪಡಿಸಬಹುದಾಗಿದೆ.

ಮತದಾನ ಮಾಡಲು ಬೇಕಾಗುವ ಪರ್ಯಾಯ ದಾಖಲೆಗಳು

ಆಧಾರ್ ಕಾರ್ಡ್
ಎಂಎನ್‌ಆರ್‌ಇಜಿಎ ಜಾಬ್ ಕಾರ್ಡ್ ಬ್ಯಾಂಕ್, ಅಂಚೆ ಕಚೇರಿ ನೀಡಿದ ಭಾವಚಿತ್ರವಿರುವ ಪಾಸ್ ಪುಸ್ತಕ,

ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್,

ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್,
ಎನ್ಪಿಆರ್ ಅಡಿಯಲ್ಲಿ ಆರ್ಜಿಐ ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್ಫೋರ್ಟ್

ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ, ರಾಜ್ಯ, ಕೇಂದ್ರ ಸರ್ಕಾರದ ಸಾರ್ವಜನಿಕ ಉದ್ದಿಮೆಗಳು ತಮ್ಮ ನೌಕರರಿಗೆ ನೀಡಿರುವ ಸೇವಾ ಗುರುತಿನ ಚೀಟಿ

ಸಂಸದರು, ವಿಧಾನಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರುಗಳಿಗೆ ನೀಡಿರುವ ಅಧಿಕೃತ ಗುರುತಿನ ಚೀಟಿಗಳು, ಅಂಗವಿಕಲರ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ಪತ್ರದ ಮೂಲ ಪ್ರತಿಗಳನ್ನು ಮತದಾನದ ವೇಳೆ ಪರ್ಯಾಯ ದಾಖಲೆಗಳನ್ನಾಗಿ ಬಳಸಬಹುದು.

ಒಟ್ಟಿನಲ್ಲಿ ಯಾವುದೇ ಪೂರ್ವಾಗ್ರಹ ಪೀಡಿತರಾಗದೇ ಮತದಾನ ಮಾಡಿ, ಪ್ರಜಾಪ್ರಭುತ್ವವನ್ನು ಗೆಲ್ಲಿಸಿ.

Leave a Comment

Your email address will not be published. Required fields are marked *